ಬೆಂಗಳೂರು : ಇಂದು ರಾಜ್ಯಾದ್ಯಂತ ಏಕಕಾಲದಲ್ಲಿ ಉಚಿತ ಬಸ್ ಪ್ರಯಾಣಕ್ಕೆ (ಶಕ್ತಿ ಯೋಜನೆ) ಹಸಿರು ನಿಶಾನೆ ದೊರೆಯಲಿದೆ. ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆ ಟಿಕೆಟ್ ಹಾಗೂ ಲೋಗೋ ಅನಾವರಣಗೊಳಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಬೆಂಗಳೂರು ವಿಭಾಗದ ಶಾಸಕರು, ಸಂಸದರು ಉಪಸ್ಥಿತರಿರುವರು. ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರೆಯುತ್ತಿದ್ದಂತೆ ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ುಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಲಾಗುವುದು.
ಮಧ್ಯಾಹ್ನ 1 ಗಂಟೆ ಬಳಿಕ ಬಿಎಂಟಿಸಿ, ಕೆಎಸ್ಆರ್ಟಿಸಿ, ಎನ್ ಡಬ್ಲ್ಯೂಆರ್ಟಿಸಿ, ಕೆಕೆಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು.
ಇದನ್ನೂ ಓದಿ : ಬಸ್ ಪ್ರಯಾಣ ಫ್ರೀ.. ಆದ್ರೆ, ಲಗೇಜ್ ಗೆ ದುಡ್ಡು ಕೊಡಬೇಕು : ಬಿಎಂಟಿಸಿ ಎಂ.ಡಿ ಸತ್ಯವತಿ
ಈ ನಿಯಮಗಳು ಅನ್ವಯ
- ಮಹಿಳಾ ಪ್ರಯಾಣಿಕರಿಗೆ ಪ್ರಯಾಣದ ದೂರದ ಮಿತಿ ಇರುವುದಿಲ್ಲ.
- ರಾಜ್ಯದ ಒಳಗೆ ಪ್ರಯಾಣಿಸಲು ಮಾತ್ರ ಅವಕಾಶ.
- ರಾಜಹಂಸ, ನಾನ್ ಎಸಿ ಸ್ಲಿಪರ್, ಎಸಿ ಸ್ಲಿಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಅಂಬಾರಿ, ಅಂಬಾರಿ ಡೀಮ್ ಕ್ಲಾಸ್, ಅಂಬಾರಿ ಉತ್ಸವ್, ಫೈ ಬಸ್, ಇವಿ ಪ್ಲಸ್ ಬಸ್ ನಲ್ಲಿ ಫ್ರೀ ಪ್ರಯಾಣ ಇರುವುದಿಲ್ಲ.
- ಕೆಲವು ಅಂತಾರಾಜ್ಯ ಬಸ್ ಗಳಲ್ಲಷ್ಟೇ ಉಚಿತ ಪ್ರಯಾಣಕ್ಕೆ ಅವಕಾಶ.
- ಕೆಎಸ್ಸಾರ್ಟಿಸಿ ಬಸ್ ಗಳಲ್ಲಿ ಪುರುಷರಿಗೆ ಶೇ.50ರಷ್ಟು ಆಸನ ಮೀಸಲು.
- ಯಾವುದೇ ಗುರುತಿನ ಚೀಟಿ ತೋರಿಸಿ ಉಚಿತ ಪ್ರಯಾಣ ಮಾಡಬಹುದು.