Wednesday, January 22, 2025

ವಿರೋಧಿಗಳು ಎಷ್ಟೇ ಅಪಪ್ರಚಾರ ಮಾಡಲಿ, ಕಾಂಗ್ರೆಸ್ ಗ್ಯಾರಂಟಿ ಖಚಿತ : ದಿನೇಶ್ ಗುಂಡೂರಾವ್

ಬೆಂಗಳೂರು : ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಇಂದು ಚಾಲನೆ ಸಿಗಲಿದ್ದು, ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ ಯೋಜನೆ’ಯೇ ಸಾಕ್ಷಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ತಮ್ಮ ವಿರೋಧಿಗಳಿಗೆ ಹಾಗೂ ಬಿಜೆಪಿ ನಾಯಕರ ಹೇಳಿಕೆಗಳಿಗೆ ಟಾಂಗ್ ನೀಡಿದ್ದಾರೆ.

ಚುನಾವಣಾ ಪೂರ್ವದಲ್ಲಿ ನಾವು ಕೊಟ್ಟ 5 ಗ್ಯಾರಂಟಿಗಳ ಬಗ್ಗೆ ಬಿಜೆಪಿಯವರು ಹಾಗೂ ಕೆಲ ಪಟ್ಟಭಧ್ರ ಹಿತಾಸಕ್ತಿಗಳು ಅಪಪ್ರಚಾರ ನಡೆಸಿದ್ದರು. ಈ ಯೋಜನೆಗಳು ಅನುಷ್ಟಾನವಾಗುವುದೇ ಇಲ್ಲ ಎಂದು ಜನರಲ್ಲಿ ಗೊಂದಲ ಮೂಡಿಸಿದ್ದರು. ಆದರೆ, ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ ಇಂದಿನಿಂದ ಅನುಷ್ಠಾನವಾಗುತ್ತಿರುವ ‘ಶಕ್ತಿ’ ಯೋಜನೆಯೇ ಸಾಕ್ಷಿ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಖಾಸಗಿ ಬಸ್ ಗಳಲ್ಲಿ ಫ್ರೀ ಪ್ರಯಾಣ ಸೇವೆ ಸದ್ಯಕ್ಕಿಲ್ಲ : ಸಚಿವ ರಾಮಲಿಂಗಾ ರೆಡ್ಡಿ

ವಿರೋಧಿಗಳು ಎಷ್ಟೇ ಅಪಪ್ರಚಾರ ಮಾಡಲಿ

ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆ ಅನುಷ್ಠಾನವಾಗುತ್ತಿರುವುದು ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಪ್ರತೀಕ. ಇದೇ ರೀತಿ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳು ಕೂಡ ಜಾರಿಯಾಗಲಿವೆ. ಈ ಬಗ್ಗೆ ರಾಜಕೀಯ ವಿರೋಧಿಗಳು ಎಷ್ಟೇ ಅಪಪ್ರಚಾರ ಮಾಡಲಿ, ಈ ಯೋಜನೆಗಳು ಜನರಿಗೆ ತಲುಪುವುದು ಖಚಿತ ಎಂದು ಬರೆದುಕೊಂಡಿದ್ದಾರೆ.

ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳ ಒಳಗೆ ಈ ಯೋಜನೆ ಅನುಷ್ಟಾನವಾಗುತ್ತಿರುವುದು‌ ಸಾರ್ಥಕತೆ ಮೂಡಿಸಿದೆ. ನಾನು ಉಸ್ತುವಾರಿಯಾಗಿರುವ ದಕ್ಷಿಣ ಕನ್ನಡದ ಬಿಜೈನ KSRTC ನಿಗಮದಲ್ಲಿ ಈ ಯೋಜನೆಗೆ ಇಂದು ಚಾಲನೆ ನೀಡಲಿದ್ದೇನೆ.

RELATED ARTICLES

Related Articles

TRENDING ARTICLES