ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮೊದಲ ಟಿಕೆಟ್ ನೀಡಿದರು.
ವಿಧಾನಸೌಧದ ಬಳಿ ಶಕ್ತಿ ಯೋಜನೆಯ ಲೋಗೋ ಹಾಗೂ ಸ್ಮಾರ್ಟ್ ಕಾರ್ಡ್ ಮಾದರಿ ಅನಾವರಣಗೊಳಿಸಿ, ಅಲ್ಲಿಂದ ಮೆಜೆಸ್ಟಿಕ್ ವರೆಗೂ ಬಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಯಾಣ ಬೆಳೆಸಿದರು.
ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ವಂದಿತಾ ಶರ್ಮಾ ಅವರಿಗೆ ಮೊದಲ ಟಿಕೆಟ್ ಹರಿದು ಕೊಟ್ಟರು. ಬಳಿಕ, ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವರಿಗೆ ಎರಡನೇ ಟಿಕೆಟ್ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ಟಿಕೆಟ್ ಹರಿದು ಕೊಡುವ ಮೂಲಕ ಮತ್ತೊಮ್ಮೆ ಶಕ್ತಿ ಯೋಜನೆಗೆ ಚಾಲನೆ ನೀಡಿದರು.
ವಿಧಾನಸೌಧ ಟು ಮೆಜೆಸ್ಟಿಕ್ ಜರ್ನಿ
ಬಿಎಂಟಿಸಿಯ ಡಿಪೋ 10ರ ಕೆಎ 57 ಎಫ್ 5324 ಸಂಖ್ಯೆಯ ಬಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ರಾಮಲಿಂಗಾರೆಡ್ಡಿ, ಇಲಾಖೆ ಅಧಿಕಾರಿಗಳು ಮೆಜೆಸ್ಟಿಕ್ ವರೆಗೂ ಬಸ್ನಲ್ಲಿ ಪ್ರಯಾಣ ಮಾಡಿದರು.
ವಿಧಾನಸೌಧದಿಂದ ಹೊರಟ ಬಸ್ ಹೋಟೆಲ್ ಕ್ಯಾಪಿಟಲ್, ರಾಜಭವನ ರಸ್ತೆ, ಮಹಾರಾಣಿ ಕಾಲೇಜ್, ಮೈಸೂರು ಬ್ಯಾಂಕ್ ಸರ್ಕಲ್, ಕೆ.ಜಿ ರೋಡ್ ಮೂಲಕ ಕೆಂಪೇಗೌಡ ಬಸ್ ನಿಲ್ದಾಣವನ್ನು ತಲುಪಿತು.