Wednesday, January 22, 2025

ಮಹಿಳಾ ಪ್ರಯಾಣಿಕರಿಗೆ ಪಿಂಕ್ ಕಲರ್ ಟಿಕೆಟ್ ರೆಡಿ

ಬೆಂಗಳೂರು : ಉಚಿತ ಬಸ್ ಪ್ರಯಾಣಕ್ಕೆ ಇನ್ನೇನು ಕೆಲವೇ ಕ್ಷಣದಲ್ಲಿ ಚಾಲನೆ ಸಿಗಲಿದ್ದು, ಕೆಎಸ್ಸಾರ್ಟಿಸಿ ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಪಿಂಕ್ ಬಣ್ಣದ ಟಿಕೆಟ್ ನೀಡಲಾಗುವುದು. ಬಿಎಂಟಿಸಿಯಲ್ಲಿ ಬಿಳಿ ಬಣ್ಣದ ಟಿಕೆಟ್ ವಿತರಿಸಲಾಗುತ್ತದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಕೆಎಸ್ಆರ್​​ಟಿಸಿ ಎಂ.ಡಿ ಅನ್ಬು ಕುಮಾರ್,  ಕೆಎಸ್ಸಾರ್ಟಿಸಿ ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಬಿಳಿಬಣ್ಣದ ಟಿಕೆಟ್ ನೀಡುವುದಿಲ್ಲ. ಬದಲಾಗಿ ಪಿಂಕ್‌ ಟಿಕೆಟ್ ನೀಡುತ್ತೇವೆ ಎಂದು ಹೇಳಿದ್ದಾರೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಗೆ ಚಾಲನೆ ನೀಡುವುದು. ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಬಿಳಿ ಬಣ್ಣದ ಟಿಕೆಟ್ ವಿತರಿಸಲಾಗುವುದು. ಅದರಲ್ಲಿ ಮಹಿಳಾ ಟಿಕೆಟ್ ಎಂದು ನಮೂದು ಮಾಡಲಾಗಿರುತ್ತದೆ. ಎಲ್ಲಿಂದ ಎಲ್ಲಿಗೆ ಅಂತಾ ಮಾಹಿತಿ ಇರುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬಸ್ ಪ್ರಯಾಣ ಫ್ರೀ.. ಆದ್ರೆ, ಲಗೇಜ್ ಗೆ ದುಡ್ಡು ಕೊಡಬೇಕು : ಬಿಎಂಟಿಸಿ ಎಂ.ಡಿ ಸತ್ಯವತಿ

ಶಕ್ತಿ ಯೋಜನೆ ಚಾಲನೆಗೆ ಕ್ಷಣಗಣನೆ ಶುರುವಾಗಿದೆ. ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ನವವಧುವಿನಂತೆ ಸಿಂಗಾರಗೊಂಡಿದೆ. ತಳಿರುತೋರಣಗಳಿಂದ ಬಸ್ ನಿಲ್ದಾಣ ಕಂಗೊಳಿಸುತ್ತಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಯೋಜನೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ಬಳಿಕ ಬಸ್ ಮೂಲಕ ವಿಧಾನಸೌಧದಿಂದ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಪ್ರಯಾಣ ಬೆಳಸಿ ಇಲ್ಲಿ ಸಿಎಂ ಯೋಜನೆಗೆ ಹಸಿರು ನಿಶಾನೆ ತೋರಲಿದ್ದಾರೆ.

ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಟರ್ಮಿನಲ್ ೨ ನಲ್ಲಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಮಧ್ಯಾಹ್ನ ೧೨.೩೦ಕ್ಕೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಉಚಿತ ಟಿಕೆಟ್ ನೀಡುವ ಮೂಲಕ ಚಾಲನೆ ನೀಡಲಾಗುವುದು. ಮಧ್ಯಾಹ್ನ ೧ ಗಂಟೆಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣ ಆರಂಭವಾಗಲಿದೆ.

RELATED ARTICLES

Related Articles

TRENDING ARTICLES