Wednesday, May 7, 2025

ವಿದೇಶಿ ಪ್ರಜೆ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಾಪಾರಿ ಬಂಧನ

ಬೆಂಗಳೂರು : ಭಾರತದ ಪ್ರವಾಸಕ್ಕೆ ಬಂದಿರುವ ವಿದೇಶಿ ಪ್ರವಾಸಿಗನಿಗೆ ಕಿರುಕುಳ ನೀಡಿ ಹಲ್ಲೆಗೆ ಯತ್ನಿಸಿದ ಚಿಕ್ಕಪೇಟೆ ವ್ಯಾಪಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಪೇಟೆ ವ್ಯಾಪಾರಿ ನವಾಬ್(58) ಬಂಧಿತ ಆರೋಪಿ. ಈತ ಹಳೇ ಗುಡ್ಡದಹಳ್ಳಿ ನಿವಾಸಿ. ಪೊಲೀಸರು ಈತನ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.

ನವಾಬ್ ಆಟೋ ಡ್ರೈವರ್ ಆಗಿದ್ದು ಹಳೇ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದನು. ಬಟ್ಟೆ ವ್ಯಾಪಾರ ಮಾಡುತ್ತಿರುವಾಗ ನೆದರ್ ಲ್ಯಾಂಡ್ ಪ್ರಜೆ ಪೆಡ್ರೋ ಮೊಟಾ ಅವರು ರಸ್ತೆಯಲ್ಲಿ ವಿಡಿಯೋ ಮಾಡುತ್ತಿದ್ದರು. ಆಗ ತನ್ನ ಹಳೇ ಬಟ್ಟೆ ವ್ಯಾಪಾರಕ್ಕೆ ತೊಂದರೆಯಾಗುತ್ತಾದೆಂದು ಅಥವಾ ಪೊಲೀಸ್ ನವರಿಗೆ ಏನಾದರೂ ಮಾಹಿತಿ ನೀಡಬಹುದೆಂದು ವಿಡಿಯೋ ಮಾಡದಂತೆ ತಡೆದು ಅಡ್ಡಪಡಿಸಿದ್ದನು.

ಇದನ್ನೂ ಓದಿ : ಪ್ರೇಯಸಿ ಮೇಲೆ ಪ್ರಿಯಕರ ಹಾಗೂ ಸ್ನೇಹಿತನಿಂದ ಅತ್ಯಾಚಾರ!

ಟ್ವಿಟ್ಟರ್ ನಲ್ಲಿ ದೂರು ದಾಖಲು

ವಿದೇಶಿ ಪ್ರಜೆಗೆ ತೊಂದರೆ ಮಾಡಿದ್ದಲ್ಲದೆ, ಹಲ್ಲೆಗೂ ಯತ್ನಿಸಿದ್ದ ಎನ್ನಲಾಗಿದೆ. ಈ ಸಂಬಂಧ ಮುದಸ್ಸಿರ್ ಅಹಮದ್ ಎನ್ನುವವರು ಟ್ವಿಟ್ಟರ್ ನಲ್ಲಿ ದೂರು ದಾಖಲಿಸಿದ್ದು, ಈತನನ್ನು ಪತ್ತೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇನ್ನು ಘಟನೆ ಸಂಬಂಧ ಸ್ಥಳೀಯರು ಪಶ್ಚಿಮ ಡಿಸಿಪಿ ಗಮನಕ್ಕೆ ತಂದಿದ್ದಾರೆ. ಬಳಿಕ ಪೊಲೀಸರು, ನವಾಬ್ ನನ್ನು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಸುಮೋಟೋ ಕೇಸ್ ದಾಖಲಿಸಿಕೊಂಡು ಆರೋಪಿ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಇಂಥ ಅನುಚಿತ ವರ್ತನೆ ಸಹಿಸಲ್ಲ

ಈ ಘಟನೆಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗಿದ್ದು, ಸಂಬಂಧಪಟ್ಟ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿದೇಶಿ ಪ್ರವಾಸಿಗರೊಂದಿಗೆ ಇಂತಹ ಅನುಚಿತ ವರ್ತನೆಯನ್ನು ಸಹಿಸುವುದಿಲ್ಲ ಎಂದು ಪೊಲೀಸರು ಖಡಕ್ ಸೂಚನೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES