Monday, December 23, 2024

ವಿವಿಧ ಯೋಜನೆಗಳ ಪ್ರಗತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು : ವಿವಿಧ ಯೋಜನೆಗಳ ಪ್ರಗತಿ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಇಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದು, ರಾಜ್ಯದಲ್ಲಿ ಇನ್ನೂ ಕೆಲ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಜಲಜೀವನ್ ಮಿಷನ್ ಬಗ್ಗೆ ಸಿಎಂ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ: ಸಿದ್ದಗಂಗಾ ಶ್ರೀಗಳು ನಮ್ಮನ್ನು ಬಿಟ್ಟು ಹೋಗಿಲ್ಲ : ಡಾ.ಜಿ ಪರಮೇಶ್ವರ್

8 ಜಿಲ್ಲೆಗಳ ಡಿಸಿಗಳ ಜತೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಿಎಂ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಇಂದಿರಾ ಕ್ಯಾಂಟೀನ್ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ಕೂಡ ಸಭೆ ಮಾಡಲಿದ್ದಾರೆ.

ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಸಿಎಂ ಚಾಲನೆ 

ಕರ್ನಾಟಕ ಕಾಂಗ್ರೆಸ್ ಸರ್ಕಾರದ(Congress Government) ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ(Siddaramaiah) ಚಾಲನೆ ನೀಡಿದ್ದು ರಾಜ್ಯಾದ್ಯಂತ ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ಶಕ್ತಿ ಯೋಜನೆ(Free Bus Travel For Women Scheme) ಎರಡನೇ ದಿನಕ್ಕೆ ಕಾಲಿಟ್ಟು ಮಹಿಳೆಯರು, ಯುವತಿಯರು, ವಿದ್ಯಾರ್ಥಿಗಳು ಹಣ ಖರ್ಚು ಮಾಡದೆ ಓಡಾಡುತ್ತಿದ್ದಾರೆ.

ಬಹುತೇಕ ಕೆಎಸ್​ಆರ್​ಟಿಸಿ, ಸರ್ಕಾರಿ ಬಸ್​ಗಳು ಫುಲ್ ಆಗಿದ್ದು ಖಾಸಗಿ ಬಸ್​ಗಳು ಖಾಲಿ ಖಾಲಿಯಾಗಿವೆ. ಸರ್ಕಾರದ ಫ್ರೀ ಬಸ್ ಯೋಜನೆಗೆ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ.

 

 

RELATED ARTICLES

Related Articles

TRENDING ARTICLES