ಬೆಂಗಳೂರು : ತುಮಕೂರು ನಗರಕ್ಕೆ 1,080 ಕೋಟಿ ರೂ. ವೆಚ್ಚದಲ್ಲಿ ನೀರು ಪೂರೈಕೆಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ಸಚಿವ ಎನ್.ಎಸ್ ಬೋಸ್ ರಾಜು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಕೆರೆಗಳ ತುಂಬುವ ಕೆಲಸ ಇಡೀ ರಾಜ್ಯದಲ್ಲಿ ನಡೆಯುತ್ತಿದೆ. ಅಂತರ್ಜಲ ಹೆಚ್ಚಿಸುವ ಕೆಲಸ ಕೂಡ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕೆಸಿ ವ್ಯಾಲಿ ಎರಡು ಪ್ರೊಜೆಕ್ಟ್ ಗಳು ಯಶಸ್ವಿಯಾಗಿವೆ. ಮೂರನೇ ಪ್ರೊಜೆಕ್ಟ್ ಗೆ ಮುಂದಾಗಿದ್ದೇವೆ. ಈ ಬಾರಿಯ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಬರುತ್ತಿದೆ. ರಾಜ್ಯಾದ್ಯಂತ ವೇಸ್ಟ್ ವಾಟರ್ ಶುದ್ಧಗೊಳಿಸಿ ಕೆರೆಗಳಿಗೆ ತುಂಬಿಸುವ ಕೆಲಸ ಮಾಡ್ತೇವೆ. ತುಮಕೂರು ನಗರಕ್ಕೆ ೧,೦೮೦ ಕೋಟಿ ವೆಚ್ಚದಲ್ಲಿ ನೀರು ಪೂರೈಕೆಗೆ ಯೋಜನೆ ರೂಪಿಸಲಾಗುತ್ತಿದೆ. ಸಣ್ಣ ನೀರಾವರಿ ಇಲಾಕೆಯಲ್ಲಿ ಇತ್ತಿಚೆಗೆ ನಡೆದ ಕೆಲಸಗಳ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಅಕ್ರಮ ಕಂಡು ಬಂದರೆ ಸೂಕ್ತ ಕ್ರಮ
ಸಣ್ಣ ನೀರಾವರಿ ಇಲಾಖೆಯಲ್ಲಿ ಯಾವುದೇ ಅಕ್ರಮ ಕಂಡು ಬಂದರೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಅಧಿಕಾರಿಗಳೆಲ್ಲ ಪರಿಶೀಲನೆಗೆ ತೆರಳಿದ್ದಾರೆ. ಕೆರೆಗಳ ಪರಿಸ್ಥಿತಿ ನೋಡುವುದಕ್ಕೂ ಕೂಡ ಎಕ್ಸಿಕ್ಯುಟಿವ್ ಇಂಜಿನಿಯರ್ ಗಳು ಸ್ಥಳಗಳಿಗೆ ತೆರಳಿದ್ದಾರೆ. ಮಳೆಗಾಲದಲ್ಲಿ ಕೆರೆಗಳ ಒಡ್ಡು ಒಡೆಯದಂತೆ ಪರಿಶೀಲನೆ ನಡೆಸತ್ತಾರೆ ಎಂದು ಸಚಿವ ಬೋಸ್ ರಾಜು ತಿಳಿಸಿದ್ದಾರೆ.
ಇದನ್ನೂ ಓದಿ : ವಿವಿಧ ಯೋಜನೆಗಳ ಪ್ರಗತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
ಹೈಕಮಾಂಡ್ ನಿರ್ಧಾರವೇ ಅಂತಿಮ
ವಿಧಾನ ಪರಿಷತ್ ಚುನಾವಣೆ ವಿಚಾರ ಪ್ರತಿಕ್ರಿಯಿಸಿರುವ ಅವರು, ನಾನು ಯಾವುದೇ ಮಾತುಕತೆ ಮಾಡಿಲ್ಲ. ಹೈಕಮಾಂಡ್ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಏನು ನಿರ್ಧಾರ ತೆಗೆದುಕೊಳ್ತಾರೋ ಅದೇ ಅಂತಿಮ. ನಾನು ನಮ್ಮ ನಾಯಕರು ಹೇಳಿದ ಕೆಲಸವನ್ನು ಮಾಡಿಕೊಂಡು ಹೋಗುತ್ತಿದ್ದೇನೆ. ಎಲ್ಲ ಸಮಸ್ಯೆಗಳನ್ನು ಸರಿಪಡಿಸುವುದು ಸಿಎಂ, ಡಿಸಿಎಂ ಮಾಡ್ತಾರೆ. ಕೊಟ್ಟ ಕೆಲಸವನ್ನು ಪ್ರಾಮಾಣಿಕವಾಗಿ ನಿಭಾಯಿಸಿಕೊಂಡು ಹೋಗುವುದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಬಗ್ಗೆಯೂ ಚರ್ಚೆ ಮಾಡಿದ್ದೇವೆ. ಮಕ್ಕಳಿಗೆ ಅನುಕೂಲ ಆಗುವ ರೀತಿ ವೈಜ್ಞಾನಿಕ ಕಾರ್ಯಕ್ರಮ ಯೋಜನೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.