Wednesday, January 22, 2025

ಇದು ನನ್ನ ಜೀವನ ಪೂರ್ತಿ ನೆನಪಿನಲ್ಲಿ ಉಳಿಯುವ ಚಿತ್ರ : ಸಿದ್ದರಾಮಯ್ಯ

ಬೆಂಗಳೂರು : ಮಹಿಳೆಯೊಬ್ಬರು ಬಸ್ಸಿಗೆ ನಮಸ್ಕರಿಸಿ ಬಸ್‌ ಹತ್ತಿದ ಚಿತ್ರವೊಂದು ವೈರಲ್ ಆಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತೋಷ ಹಂಚಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವದು, ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದೆ. ಇದೊಂದು‌ ನನ್ನ ಜೀವನ ಪೂರ್ತಿ ನೆನಪಿನಲ್ಲಿ ಉಳಿಯುವ‌ ಚಿತ್ರ ಎಂದು‌ ಬರೆದುಕೊಂಡಿದ್ದಾರೆ.

ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಇಂದು ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು ಎಂದು ಹೇಳಿದ್ದಾರೆ.

ಇದನ್ನೂ ಓದಿ : ‘ಸ್ತ್ರೀಗೆ ಶಕ್ತಿ ತುಂಬಲು ಶಕ್ತಿ ಯೋಜನೆ’ ಅಂತಾ ಹೆಸರು ಇಟ್ಟಿದ್ದೇವೆ : ಸಿದ್ದರಾಮಯ್ಯ

ನನ್ನನ್ನು ಮತ್ತಷ್ಟು ದೃಢವಾಗಿಸಿದೆ

ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು. ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES