ಬೆಂಗಳೂರು: ರಾಜ್ಯದಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್‌ಗಳಲ್ಲಿ ಸಂಚಾರ ಮಾಡಲು ಅನುಕೂಲ ಆಗುವಂತೆ ವಾರ್ಷಿಕ ವಿದ್ಯಾರ್ಥಿ ಪಾಸುಗಳನ್ನು ನೀಡಲು ಸಾರಿಗೆ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.
ಹೌದು, ಸಾರಿಗೆ ಇಲಾಖೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿಸಲಿಸಲು ಅವಕಾಶ ನೀಡಿದ್ದು, ಹೊಸ ದರಗಳನ್ನು ಕೂಡ ಬಿಡುಗಡೆ ಮಾಡಿದೆ.
ಹೌದು, ಇನ್ನು ರಾಜ್ಯದಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ (ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಕಾಲೇಜು/ಡಿಪ್ಲೋಮೋ, ಐಟಿಐ, ವೃತ್ತಿಪರ ಕೋರ್ಸ್‌ಗಳು, ಸಂಜೆ ಕಾಲೇಜು/ಪಿಹೆಚ್‌ಡಿ) ಹಂತ ಹಂತವಾಗಿ ಹೊಸ ದರವನ್ನು ನಿಗದಿ ಮಾಡಿದೆ. ಜೊತೆಗೆ, ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಹೊಸ ದರವನ್ನು ನಿಗದಿ ಮಾಡಿ ಆದೇಶವನ್ನು ಹೊರಡಿದೆ. ಎಲ್ಲ ಹಂತರ ವಿದ್ಯಾರ್ಥಿಗಳು ಸರ್ಕಾರ ಅಧಿಕೃತ ಜಾಲತಾಣವಾದ https://sevasindhuservices.karnataka.gov.in ಲಿಂಕ್ ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಪ್ರಸಕ್ತ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲಾಗುವುದು. ಸೇವಾಸಿಂಧು ಮೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಈ ಕ್ರಮಗಳನ್ನು ಅನುಸರಿಸಬೇಕು.
1. ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲ ಆನ್‌ಲೈನ್ ಮುಖೇನ ಅರ್ಜಿ ಸಲ್ಲಿಸಬೇಕು. ಸೇವಾಸಿಂಧು ಪೋರ್ಟಲ್ ಐಡಿ-https://sevasindhuservices.karnataka.gov.in.
2, ವಿದ್ಯಾರ್ಥಿಗಳು ದಿನಾಂಕ:12.06.2023 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಬಸ್ ಪಾಸ್‌ಗಾಗಿ ಅರ್ಜಿಗಳನ್ನು ಸಲ್ಲಸಬಹುದಾಗಿದೆ. ಆನ್ ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲುಯಾವುದೇ ಶುಲ್ಕ ಇರುವುದಿಲ್ಲ.
3. ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ.30/- ಸೇವಾ ಶುಲ್ಕವನ್ನು ಸದರಿ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶ ವಿರುತ್ತದೆ.
4. ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಕಳುಹಿಸಲಾಗುವುದು.
5. ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‌ಗೆ ತರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ / ಡೆಬಿಟ್‌ಕಾರ್ಡ್ / UPI ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ.
6. ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವಅಲ್ಲ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ. ನೆರೆ ರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ/ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ನೆರೆರಾಜ್ಯದ ಶಾಲೆ/ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ವಿದ್ಯಾರ್ಥಿರಿಯಾಯಿತಿ ಬಸ್ ಪಾಸ್ ಪಡೆಯುವ ಅಗತ್ಯವಿದೆ. ಮೇಲ್ದಂಡ ಕ್ರಮಗಳನ್ನು ಅನುಸರಿಸಿ ಗಡಿ ಭಾಗದ ವಿದ್ಯಾರ್ಥಿಗಳು ಪಾಸುಗಳನ್ನು ಪಡೆಯಬಹುದಾಗಿರುತ್ತದೆ.
7, ಕರಾರಸಾನಿಗಮ ವ್ಯಾಪ್ತಿಯ 129 ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿನಿಗಮದ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ. ನಿಗಮದ ವೆಬ್ ಸೈಟ್ ವಿಳಾಸ: https://ksrtc.karnataka.gov.in/student pass
ಸಾರಿಗೆ ಬಸ್‌ನ ವಿದ್ಯಾರ್ಥಿ ಪಾಸಿದ ದರದ ಹೀಗಿದೆ
ಬಸ್‌ಪಾಸ್‌ನ ವಿಧ ಅವಧಿ ಸಾಮಾನ್ಯ ಎಸ್‌ಸಿ/ಎಸ್‌ಟಿ ದರ
- ಪ್ರಾಥಮಿಕ ಶಾಲೆ – 10 ತಿಂಗಳು 150 150
- ಪ್ರೌಢಶಾಲೆ – 10 ತಿಂಗಳು 750 150
- ಪ್ರೌಢಶಾಲೆ ಬಾಲಕಿಯರು – 10 ತಿಂಗಳು 550 150
- ಕಾಲೇಜು/ಡಿಪ್ಲೊಮೊ – 10 ತಿಂಗಳು 1,050 150
- ಐಟಿಐ – 12 ತಿಂಗಳು 1,310 160
- ವೃತ್ತಿಪರ ಕೋರ್ಸ್ – 10 ತಿಂಗಳು 1,550 150
- ಸಂಜೆ ಕಾಲೇಜು/ಪಿಎಚ್‌ಡಿ – 10 ತಿಂಗಳು 1,350 150