Sunday, January 19, 2025

ನಾವು ಮತ್ತು ಬೊಮ್ಮಾಯಿಯವರು ಬೀಗರು : ಶಾಮನೂರು ಶಿವಶಂಕರಪ್ಪ

ದಾವಣಗೆರೆ : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶುವಶಂಕರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾವು ಮತ್ತು ಬೊಮ್ಮಾಯಿಯವರು ಬೀಗರು. ಚುನಾವಣೆ ಆದಾಗಿನಿಂದ ನಾವು ಭೇಟಿಯಾಗಿರಲಿಲ್ಲ ಎಂದು ಹೇಳಿದ್ದಾರೆ.

ನಾನು ಗೆದ್ದಿದ್ದೀನಿ, ಅವರು ಗೆದ್ದಿದ್ದಾರೆ. ಅದಕ್ಕೆ ಭೇಟಿಯಾದೆವು. ನನಗೆ ಹಾರ ಹಾಕಿದ್ರು, ನಾನು ಶಾಲು ಹೊದಿಸಿದೆ. ನಮ್ಮ ಸಂಬಂಧ ಹೀಗೆ ಮುಂದುವರಿಯಲಿ ಎಂದು ಹೇಳಿದೆ. ಕೆಲವೊಂದು ವಿಚಾರಗಳನ್ನು ಹೇಳುವುಕ್ಕೆ ಆಗುವುದಿಲ್ಲ ಎಂದು ತಿಳಿಸಿದ್ದಾರೆ.

ಅವರು ಬಿಜೆಪಿಯವರು, ನಾವು ಕಾಂಗ್ರೆಸ್ ನವರು. ಏನು ರಾಜಕೀಯ ಮಾತುಕತೆ ಇರುತ್ತೆ. ನಾವು ಹೊಂದಾಣಿಕೆ ರಾಜಕಾರಣ ಮಾಡೋದಕ್ಕೆ ಚುನಾವಣೆ ಪೂರ್ವವಾಗಿ ಭೇಟಿಯಾಗಿಲ್ಲ. ಚುನಾವಣೆ ನಂತರ ಭೇಟಿಯಾಗಿದ್ದೇವೆ. ಸಂಸದ ಪ್ರತಾಪ್ ಸಿಂಹ ಬಾಯಿಗೆ ಬಂದಂಗೆ ಮಾತಾಡುತ್ತಾನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಪಠ್ಯ ತೆಗೆದಿದ್ದು ಅವರು, ಮೂತಿಗೆ ಒರೆಸಿದ್ದು ರೋಹಿತ್ ಚಕ್ರತೀರ್ಥಗೆ : ಬಿ.ಸಿ ನಾಗೇಶ್

ಮಾತು ಕೊಟ್ಟಂಗೆ ಸರ್ಕಾರ ನಡೆದುಕೊಳ್ಳಬೇಕು

ಕಾಂಗ್ರೆಸ್ ಗ್ಯಾರಂಟಿ ಯೋಜನೆ ಕಂಡಿಷನ್ ಬಗ್ಗೆ ಶಾಮನೂರು ಶಿವಶಂಕರಪ್ಪ ಅಸಮಾಧಾನ ಹೊರಹಾಕಿದ್ದಾರೆ. ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಸರ್ಕಾರ ಕಿತ್ತುಕೊಳ್ಳಬಾರದು. ಮಾತು ಕೊಟ್ಟಂಗೆ ಸರ್ಕಾರ ನಡೆದುಕೊಳ್ಳಬೇಕು. ವಿದ್ಯುತ್ ದರ ಏರಿಕೆಯಿಂದ ಇಂಡಸ್ಟ್ರೀಸ್​ಗೆ ಹೊಡೆತ ಬಿದ್ದಿದೆ. ಇಂಡಸ್ಟ್ರಿಗಳು ಉಳಿಯುವುದು ಕಷ್ಟ ಆಗಿದೆ ಎಂದು ಬೇಸರಿಸಿದ್ದಾರೆ.

ಕಾಂಗ್ರೆಸ್ ನವರು ಒಪ್ಪಬಾರದು

ಮಾತು ಕೊಟ್ಟಂಗೆ ನಡೆದುಕೊಂಡು ವಿದ್ಯುತ್ ದರ ಏರಿಕೆ ಬಗ್ಗೆ ಆಮೇಲೆ ತೀರ್ಮಾನ ತೆಗೆದುಕೊಳ್ಳಿ. ವಿದ್ಯುತ್ ದರ ಏರಿಕೆ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ನಾವು ಮಾಡಿಲ್ಲ ಎನ್ನುತ್ತಿದ್ದಾರೆ. ಕೆಆರ್​ಇಸಿ ದರ ಏರಿಕೆ ಬಗ್ಗೆ ಬಿಜೆಪಿ ಕಾಲದಲ್ಲೇ ಆಗಿತ್ತು. ಕಾಂಗ್ರೆಸ್ ನವರು ಸೈನ್ ಮಾಡಿದ್ದಾರೋ, ಬಿಟ್ಟಿದ್ದಾರೋ ಗೊತ್ತಿಲ್ಲ. ಅದನ್ನು ಕಾಂಗ್ರೆಸ್ ನವರು ಒಪ್ಪಬಾರದು. ಹಿಂದೆ ದರ ಹೇಗಿತ್ತೋ ಅದೇ ರೀತಿ ಮುಂದುವರಿಸಬೇಕು ಎಂದು ಹೇಳಿದ್ದಾರೆ.

ಶಕ್ತಿ ಯೋಜನೆಯಿಂದ ಖಾಸಗಿ ಬಸ್ ಗಳಿಗೆ ನಷ್ಟ ಆದ್ರೆ ನಾವೇನು ಮಾಡೋಕೆ ಆಗುತ್ತೆ. ರೈಲುಗಳಲ್ಲಿ ಸಂಚರಿಸುವ ಮಹಿಳೆಯರ ಸಂಖ್ಯೆ ಸಹ ಕಡಿಮೆ ಆಗಿದೆ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES