Monday, February 24, 2025

ಪ್ರಿಯಾಂಕ್ ಖರ್ಗೆ ಕೊಟ್ಟಿದ್ದ 6ನೇ ಗ್ಯಾರಂಟಿ ಜಾರಿ

ಬೆಂಗಳೂರು : ನಮ್ಮ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದರೆ ಕಲಬುರಗಿಯಲ್ಲಿ ನಡೆದ ಎಲ್ಲಾ ಭ್ರಷ್ಟಾಚಾರಗಳನ್ನು ತನಿಖೆ ಮಾಡಿಸುತ್ತೇವೆ. ಎಂದು 6ನೇ ಗ್ಯಾರಂಟಿಯನ್ನೂ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದರೂ ಅಂದ್ರೆ ಇದೀಗ ಜಾರಿಯಾಗಿದೆ.

ಹೌದು, ತಪ್ಪಿತಸ್ಥರ ವಿರುದ್ದ ಕ್ರಮ ಗ್ಯಾರಂಟಿ ಎಂದು ಹೇಳಿಕೆ ನೀಡಿದ್ದರು. ಅದರಂತೆ ಇದೀಗ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿ(KKRDB) ಹಾಗೂ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕ್ರತಿಕ ಸಂಘದ ಅಕ್ರಮಗಳ ತನಿಖೆಯನ್ನು ಅಧಿಕಾರಿಗಳ ತಂಡ ಆರಂಭಿಸಿದ್ದಾರೆ.

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕ್ರತಿಕ ಸಂಘಕ್ಕೆ ಬಿಡುಗಡೆ ಮಾಡಿ ವೆಚ್ಚ ಮಾಡಿರುವ ರೂ 300 ಕೋಟಿ ಅನುದಾನದಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ದೂರುಗಳು ಬಂದ ಹಿನ್ನೆಲೆಯನ್ನು ತನಿಖೆ ನಡೆಸಲಾಗುತ್ತಿದೆ.

 

RELATED ARTICLES

Related Articles

TRENDING ARTICLES