Sunday, December 22, 2024

ನನ್ನಿಂದ ಮಗಳಿಗೂ ಕ್ಯಾನ್ಸರ್ ಬಂತೆಂದು ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

ಬೆಂಗಳೂರು : ತನ್ನಿಂದಲೇ ಮಗಳಿಗೆ ಕ್ಯಾನ್ಸರ್ ಬಂದಿದೆ ಎಂದು ಮನನೊಂದು ಪೊಲೀಸ್​ ಸಿಬ್ಬಂದಿ ಸಾವಿಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.

ಬೆಂಗಳೂರಿನ ಅಶೋಕನಗರ ಟ್ರಾಫಿಕ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕುಮಾರ್ ಎಂಬುವವರೇ ಮೃತಪಟ್ಟ ಪೊಲೀಸ್ ಸಿಬ್ಬಂದಿ. ಇವರು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನವರು.

ಮೃತ ಕುಮಾರ್ ಕೆಲ ವರ್ಷಗಳಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಇವರು ಬೆಂಗಳೂರಿನ‌ ಡೈರಿ ಸರ್ಕಲ್ ಬಳಿಯಿರುವ ಪೊಲೀಸ್ ಕ್ವಾಟ್ರಸ್​ನಲ್ಲಿ ಕುಟುಂಬದೊಂದಿಗೆ ವಾಸವಿದ್ದರು. ಕೆಲ ಸಮಯದ ಹಿಂದೆ ಕ್ಯಾನ್ಸರ್​ನ ಲಕ್ಷಣಗಳು ಅವರ ಓರ್ವ ಮಗಳಲ್ಲಿಯೂ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮಗಳಿಗೆ ಟ್ರೀಟ್​ಮೆಂಟ್​ ಕೊಡಿಸಿದ್ದರು.

ಇದನ್ನೂ ಓದಿ : ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ ಐ ಆತ್ಮಹತ್ಯೆ

ಕುಮಾರ್ ಮಗಳು ಇತ್ತೀಚೆಗೆ ಚೇತರಿಸಿಕೊಳ್ಳುತ್ತಿದ್ದರು. ಆದರೂ, ನನ್ನಿಂದಲೇ ಮಗಳಿಗೆ ಕ್ಯಾನ್ಸರ್ ಬಂದಿದೆ ಎಂದು ಮನನೊಂದು ನಿನ್ನೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಗೆ ಆಸರೆಯಾಗಿದ್ದ ಕುಮಾರ್ ನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸಾವಿನಲ್ಲಿಯೂ ಸಾರ್ಥಕತೆ

ಮೃತ ಕುಮಾರ್ ಕುಟುಂಬ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದೆ. ಕುಮಾರ್ ಅವರ ಕಣ್ಣುಗಳನ್ನು ದಾನ ಮಾಡಿದ್ದಾರೆ. ಆ ಮೂಲಕ ಮತ್ತೊಬ್ಬರಿಗೆ ನೆರವಾಗಿದ್ದಾರೆ. ಕುಮಾರ್ ಅವರ ಅಗಲಿಕೆಗೆ ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ.

RELATED ARTICLES

Related Articles

TRENDING ARTICLES