Monday, November 18, 2024

‘ಡೇರ್‌ ಡೆವಿಲ್‌ ಮುಸ್ತಾಫಾ’ ಸಿನ್ಮಾಗೆ ತೆರಿಗೆ ವಿನಾಯಿತಿ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಡೇರ್​ ಡೆವಿಲ್ ಕೃತಿ ಆಧರಿಸಿದ ​ಸಿನ್ಮಾಗೆ ತೆರಿಗೆ ವಿನಾಯಿತಿಯನ್ನು ರಾಜ್ಯ ಸರ್ಕಾರ ನೀಡಿದೆ. 

ಹೌದು, ಇತ್ತೀಚೆಗಷ್ಟೇ ತೆರೆಕಂಡಿದ್ದ ಶಶಾಂಕ್ ಸೋಗಲ್ ನಿರ್ದೇಶನದ ‘ಡೇರ್ ಡೆವಿಲ್ ಮುಸ್ತಾಫಾ’ ಸಿನಿಮಾಗೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ನೀಡಿದೆ.

ತಮ್ಮ ಬರಹ ಮತ್ತು ಬದುಕಿನ ಮೂಲಕ ಒಂದಿಡೀ ತಲೆಮಾರಿನ ಜನರನ್ನು ಪ್ರಭಾವಿಸಿದ ಹಾಗೂ ಪ್ರಭಾವಿಸುತ್ತಲೇ ಇರುವ ಕನ್ನಡದ ಜನಪ್ರಿಯ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಕತೆಯಾಧಾರಿತ ‘ಡೇರ್ ಡೆವಿಲ್ ಮುಸ್ತಾಫಾ’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ ಆದೇಶಿಸಿದ್ದೇನೆ.

ಇಂದಿನ ಕಾಲಘಟ್ಟಕ್ಕೆ ಬೇಕಿರುವುದು ಸೌಹಾರ್ದತೆ, ಪ್ರೀತಿ, ವಿಶ್ವಾಸಗಳ ಬುನಾದಿಯ ಮೇಲೆ ಸಮಾಜ ಕಟ್ಟುವ ಮನಸುಗಳು. ಇಂಥದ್ದೊಂದು ಕಾರ್ಯಕ್ಕೆ ಕೈಹಾಕಿದ ಚಿತ್ರತಂಡಕ್ಕೆ ಅಭಿನಂದನೆಗಳು. ದ್ವೇಷ ಅಳಿಸಿ, ಪ್ರೀತಿ ಹಂಚುವ ಜನರಿಗೆ ನಮ್ಮ ನಿಮ್ಮೆಲ್ಲರ ಬೆಂಬಲ ಇರಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಇತ್ತೀಚೆಗೆ 25 ದಿನಗಳನ್ನು ಪೂರೈಸಿದ ‘ಡೇರ್​​ಡೆವಿಲ್​ ಮುಸ್ತಫಾ’ ಚಿತ್ರ ಈಗ 50ನೇ ದಿನದತ್ತ ಮುನ್ನುಗ್ಗುತ್ತಿದೆ. ಈ ಸಂದರ್ಭದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯಿತಿ ಸಿಗುತ್ತಿರುವುದು ಚಿತ್ರತಂಡದ ಖುಷಿಗೆ ಕಾರಣ ಆಗಿದೆ. ಶಶಾಂಕ್​ ಸೋಗಾಲ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಶಿಶಿರ್​ ಬೈಕಾಡಿ, ಆದಿತ್ಯ ಆಶ್ರೀ, ಸುಪ್ರೀತ್​ ಭಾರದ್ವಾಜ್​, ಆಶಿತ್​ ಶ್ರೀವತ್ಸಾ, ಅಭಯ್​, ಮಂಡ್ಯ ರಮೇಶ್​, ಉಮೇಶ್​, ಪ್ರೇರಣಾ ಮುಂತಾದ ಕಲಾವಿದರು ‘ಡೇರ್​ಡೆವಿಲ್​ ಮುಸ್ತಫಾ’ ಸಿನಿಮಾದಲ್ಲಿ ನಟಿಸಿದ್ದಾರೆ.

RELATED ARTICLES

Related Articles

TRENDING ARTICLES