Thursday, December 26, 2024

‘ಸುಳ್ಳುರಾಮಯ್ಯ’ ಅಲ್ಲ ಅನ್ನೋದಾದ್ರೆ ಕಮಿಟ್ಮೆಂಟ್ ಲೆಟರ್ ತೋರಿಸಲಿ : ಸಿ.ಟಿ ರವಿ

ಚಿಕ್ಕಮಗಳೂರು : ‘ಸುಳ್ಳುರಾಮಯ್ಯ’ ಅಲ್ಲಾ ಅನ್ನೋದಾದರೆ ಕಮಿಟ್ಮೆಂಟ್ ಲೆಟರ್ ತೋರಿಸಲಿ ಎಂದು ಮಾಜಿ ಸಚಿವ ಸಿ.ಟಿ ರವಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.

ಅಕ್ಕಿ ರಾಜಕೀಯದಲ್ಲಿ ಕೇಂದ್ರದ ಮೇಲೆ ಕಾಂಗ್ರೆಸ್ ಆರೋಪ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅಕ್ಕಿ ಕಳಿಸುತ್ತೇವೆ ನಿಮ್ಮ ಹೆಸರು ಹಾಕ್ಕೊಂಡು ಕೊಡಿ ಅಂತ ಲೆಟರ್ ಕಳಿಸಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಎಫ್.ಸಿ.ಐ ನಿಮಗೆ ಅಗತ್ಯವಿರುವ ಅಕ್ಕಿ ಕಳಿಸುತ್ತೇವೆ ಎಂದು ಹೇಳಿದ್ದಾರಾ? ಲೆಟರ್ ತೋರಿಸಿ. ಎಲ್ಲಿದೆ ಕಮಿಟ್ಮೆಂಟ್ ಲೆಟರ್ ತೋರಿಸಲಿ. ತನ್ನ ಕೈನಲ್ಲಿ ಆಗದಿರುವುದಕ್ಕೆ ಕೇಂದ್ರದ ಮೇಲೆ ಬೊಟ್ಟು ಮಾಡುವುದನ್ನು ಈಗಲೇ ಶುರು ಮಾಡಿದ್ದಾರೆ. ನಾಲ್ಕೈದು ತಿಂಗಳ ಬಳಿಕ ಎಂದು ಭಾವಿಸಿದ್ದೆ ಆರೋಪ ಮಾಡುವುದನ್ನು ಈಗಲೇ ಶುರು ಮಾಡಿದ್ದಾರೆ ಎಂದು ಕುಟುಕಿದ್ದಾರೆ.

ಇದನ್ನೂ ಓದಿ : ಮೊದ್ಲು ಎಣ್ಣೆ ಹೊಡೆದಾಗ ಕಿಕ್, ಈಗ ಬಾಟೆಲ್ ನೋಡಿದ್ರೇ ಕಿಕ್ : ಆರ್. ಅಶೋಕ್

ಹಣ ಕೊಟ್ಟರೆ ಅಕ್ಕಿ ಸಿಗುತ್ತೆ, ದುಡ್ಡು ಹಾಕಿ

ಜುಲೈ 1ರಿಂದ ಅಕ್ಕಿ ಉಚಿತ ಎಂದು ಭಾಷಣ, ಈಗ ಕೇಂದ್ರದ ಮೇಲೆ ಆರೋಪ. ನೀವು ಎಲ್ಲಾ ಬಿ.ಪಿ.ಎಲ್ ಫಲಾನುಭವಿಗಳ ಖಾತೆಗೆ ಹಣ ಹಾಕಿ. ಅವರೇ ಅಕ್ಕಿ ಕೊಂಡುಕೊಳ್ಳುತ್ತಾರೆ. ಆಕಾಶವೇನು ಕಳಚಿ ಬಿದ್ದಿಲ್ಲ, ಹಣ ಕೊಟ್ಟರೆ ಅಕ್ಕಿ ಸಿಗುತ್ತೆ, ಮೊದಲು ಹಣ ಹಾಕಿ, ಕೊಟ್ಟರೆ ನಾನು ಕೊಟ್ಟೆ ಅನ್ನೋದು, ಕೊಡದಿದ್ದರೆ ಕೇಂದ್ರದ ಮೇಲೆ ಗೂಬೆ ಕೂರಿಸುವುದು ನ್ಯಾಯವೇ? ಎಂದು ಛೇಡಿಸಿದ್ದಾರೆ.

ವಿದ್ಯುತ್ ದರವನ್ನು ನಿಧಾನವಾಗಿ ಏರಿಸಿದೆ. ಪ್ರಶ್ನಿಸಿದರೆ ಹಿಂದಿನ ಸರ್ಕಾರದ ತೀರ್ಮಾನ ಅದು ಎನ್ನುತ್ತಿದ್ದಾರೆ. ಹಿಂದೆ ಮುಂದೆ ನೋಡದೆ ಪ್ರಸ್ತಾವನೆಗೆ ಒಪ್ಪಿಗೆ ಕೊಟ್ಟವರು ಯಾರು? ಸದ್ದಿಲ್ಲದೆ ಮದ್ಯದ ದರವನ್ನೂ ಈ ಸರ್ಕಾರ ಏರಿಕೆ ಮಾಡಿದೆ ಎಂದು ಗರಂ ಆಗಿದ್ದಾರೆ.

RELATED ARTICLES

Related Articles

TRENDING ARTICLES