Monday, December 23, 2024

ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ‘ಜನ ಸೇನಾ’ ಸ್ಪರ್ಧಿಸಲಿದೆ : ಪವನ್ ಕಲ್ಯಾಣ್

ಬೆಂಗಳೂರು : ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ‘ಜನ ಸೇನಾ’ ಪಕ್ಷವು ಸ್ಪರ್ಧಿಸಲಿದೆ ಎಂದು ಜನ ಸೇನಾ ಸಂಸ್ಥಾಪಕ ಹಾಗೂ ನಟ ಪವನ್ ಕಲ್ಯಾಣ್ ತಿಳಿಸಿದ್ದಾರೆ.

ಪೂರ್ವ ಗೋದಾವರಿ ಜಿಲ್ಲೆಯ ಕತಿಪುಡಿ ಗ್ರಾಮದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಚುನಾವಣಾ ಸ್ಪರ್ಧೆ ಬಗ್ಗೆ ಅಧಿಕೃತವಾಗಿ ಘೋಷಿಸಿದ್ದಾರೆ.

ಜನ ಸೇನಾ ಪಕ್ಷವು ವಿಧಾನಸಭೆಯನ್ನು ಪ್ರವೇಶಿಸಲಿದೆ. ಆ ಮೂಲಕ ಹೆಜ್ಜೆ ಗುರುತುಗಳನ್ನು ಮೂಡಿಸಲಿದೆ. ಸಾಧ್ಯವಾದಷ್ಟು ಜನರ ಪರವಾಗಿ ನಿಲುತ್ತೇವೆ ಎಂದು ನಟ ಪವನ್ ಕಲ್ಯಾಣ್ ಹೇಳಿದ್ದಾರೆ.

ಇದನ್ನೂ ಓದಿ : ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿ ಸೋತಿದೆ : ಸಿ.ಟಿ ರವಿ ಅಸಮಾಧಾನ

ನೆಲದ ಮೇಲೆ ಕೂರುವಂತೆ ಮಾಡುತ್ತೇವೆ

ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ ಅವರು ಸರಿಯಾದ ರೀತಿಯಲ್ಲಿ ಆಡಳಿತ ನಡೆಸಲಿ. ಇಲ್ಲದಿದ್ದರೆ ಮುಂದೊಂದು ದಿನ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರನ್ನು ನೆಲದ ಮೇಲೆ ಕೂರುವಂತೆ ಮಾಡಲಾಗುವುದು ಎಂದು ಪವನ್ ಕಲ್ಯಾಣ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

2019ರ ವಿಧಾನಸಭಾ ಚುನಾವಣೆಯಲ್ಲಿ ರಾಪಾಕ ವರಪ್ರಸಾದ್ ಗೆಲುವಿನ ಮೂಲಕ ಜನ ಸೇನಾ ಪಕ್ಷ ಒಂದು ವಿಧಾನಸಭಾ ಸ್ಥಾನವನ್ನು ಗೆಲ್ಲುವಲ್ಲಿಯಶಸ್ವಿಯಾಗಿತ್ತು. ಈ ಚುನಾವಣೆಯಲ್ಲಿ ಪವನ್ ಕಲ್ಯಾಣ್ ಎರಡು ಕ್ಷೇತ್ರಗಳಲ್ಲಿ ಪರಾಭವಗೊಂಡಿದ್ದರು. ಅದರಲ್ಲಿ ಭೀಮಾವರಂ ಕೂಡ ಒಂದಾಗಿದೆ. ಷಡ್ಯಂತ್ರದಿಂದ ನಾವು ಸೋಲು ಕಂಡಿದ್ದೆವು ಎಂದು ಪವನ್ ಕಲ್ಯಾಣ್ ಆರೋಪ ಮಾಡಿದ್ದಾರೆ.

RELATED ARTICLES

Related Articles

TRENDING ARTICLES