Monday, December 23, 2024

ಉದ್ಯಮಿ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ ಕದ್ದ ಕಳ್ಳರ ಬಂಧನ

ಮಂಗಳೂರು : ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮುಂಬೈ ಉದ್ಯಮಿ ಐಕಳ ಹರೀಶ್ ಶೆಟ್ಟಿ ಮನೆ ಕಳ್ಳತನ ಪ್ರಕರಣದಲ್ಲಿನ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾರ್ಕಳ ಬಜಗೋಳಿ ನಿವಾಸಿ ಗಣೇಶ್ ನಾಯ್ಕ್(26) ಮತ್ತು ಕೊಡಗು ವಿರಾಜಪೇಟೆ ನಿವಾಸಿ ರಂಜಿತ್(26) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 1 ಕೆ.ಜಿ. ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ : ಮಸೀದಿ, ದರ್ಗಾಗಳಿಗೆ ಕನ್ನ ಹಾಕುತ್ತಿದ್ದ ಖತರ್ನಾಕ್ ಚೋರ ಅಂದರ್ : ಕಾರಣ ಏನು ಗೊತ್ತಾ?

ಲಾಕ್​ ಮುರಿದು ದರೋಡೆ

ಜನವರಿ 15ರಂದು ಐಕಳ ಹರೀಶ್ ಶೆಟ್ಟಿ ಮನೆಯ ಎದುರಿನ ಬಾಗಿಲಿನ ಲಾಕ್​ ಅನ್ನು ಕಳ್ಳರು ಮುರಿದು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿಯ ಆಭರಣ ಹಾಗೂ ನಗದನ್ನು ಕಳವು ಮಾಡಿದ್ದರು. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ತನಿಖೆಯನ್ನು ನಗರ ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿತ್ತು. ಈ ಕ್ಷಿಷ್ಟಕರವಾದ ಪ್ರಕರಣದ ತನಿಖೆಯನ್ನು ಕೈಗೊಂಡ ಮಂಗಳೂರು ಸಿಸಿಬಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಮಾಹಿತಿಯನ್ನು ಸಂಗ್ರಹಿಸಿ ಚಾಣಕ್ಷತನದಿಂದ ಪ್ರಕರಣವನ್ನು ಭೇದಿಸಿದ್ದಾರೆ.

RELATED ARTICLES

Related Articles

TRENDING ARTICLES