ಬೆಂಗಳೂರು: ರಾಜ್ಯದಲ್ಲಿ ತಾರಕಕ್ಕೇರಿದ ಅಕ್ಕಿ ರಾಜಕೀಯಕ್ಕೆ ಸಂಬಂಧಿಸಿದಂತೆ ಸಿ.ಟಿ ರವಿ ಸವಾಲಿಗೆ ಸಿಎಂ ಸಿದ್ದರಾಮಯ್ಯ ಸಾಕ್ಷಿ ಸಮೇತ ತಿರುಗೇಟು ನೀಡಿದ್ದಾರೆ.
ಪಿಫ್‍ಸಿಐ (FCI) ಪತ್ರ ಹಾಕಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಸಿ.ಟಿ ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿ. ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಬಿಜೆಪಿಗರು ಆಗ್ರಹಿಸಬೇಕು. ಅದನ್ನು ಬಿಟ್ಟು ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಭಾರತೀಯ ಆಹಾರ ನಿಗಮ (ಎಫ್ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್ಮೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ ನಾಯಕ @CTRavi_BJP ಸವಾಲು ಹಾಕಿದ್ದರು.
ಇಲ್ಲಿದೆ ಎಫ್.ಸಿ.ಐ ಕಮಿಟ್ಮೆಂಟ್ ಪತ್ರ.
ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ… pic.twitter.com/y6uT7eLXlw
— Siddaramaiah (@siddaramaiah) June 16, 2023
ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿದ್ದಾರೆ ಎಂದು ಟ್ವೀಟ್‍ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ: ಜನರಿಗೆ ಹೊರೆಯಾಗದಂತೆ ಗ್ಯಾರಂಟಿ ಜಾರಿ ಮಾಡಿ : ಸೀಕಲ್ ರಾಮಚಂದ್ರಗೌಡ
ಈ ವಿಚಾರವಾಗಿ ಬಿಜೆಪಿ ನಾಯಕರು ಕಾಂಗ್ರೆಸ್ (Congress) ವಿರುದ್ಧ ಕಿಡಿಕಾರಿದ್ದರು. ಅಲ್ಲದೇ ಭಾರತೀಯ ಆಹಾರ ನಿಗಮ (FCI) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕರಾರು ಪತ್ರ ತೋರಿಸಲಿ ಎಂದು ಬಿಜೆಪಿ ನಾಯಕ ಸಿ.ಟಿ ರವಿ ಸವಾಲು ಹಾಕಿದ್ದರು.