Friday, November 22, 2024

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಪ್ರಕರಣ : ಆರೋಪಿ ಸಂತೋಷ್ ರಾವ್ ದೋಷಮುಕ್ತ

ಬೆಂಗಳೂರು : ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಆರೋಪಿ ಸಂತೋಷ್‌ ರಾವ್ ದೋಷಮುಕ್ತ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಇಂದು‌ ಸಿಬಿಐ ಕೋರ್ಟ್ ತೀರ್ಪು ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ವಿದ್ಯಾರ್ಥಿನಿ ಆಗಿದ್ದ ಸೌಜನ್ಯ ಪ್ರಕರಣದಲ್ಲಿ 11 ವರ್ಷಗಳ ಬಳಿಕ ತೀರ್ಪು ನೀಡಿದೆ.

ಬೆಂಗಳೂರು ಸಿಬಿಐ ಕೋರ್ಟ್‌ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದೆ. ಆರೋಪಿ ಸಂತೋಷ್‌ ರಾವ್‌ ನನ್ನು ಖುಲಾಸೆ ಮಾಡಿದೆ. ಆರೋಪಿ ವಿರುದ್ಧ ಸಲ್ಲಿಕೆ ಮಾಡಲಾಗಿರುವ ಸಾಕ್ಷ್ಯಾಧಾರಗಳಲ್ಲಿ ಕೊರತೆ ಹಿನ್ನೆಲೆ ದೋಷಮುಕ್ತ ಮಾಡಿರುವುದಾಗಿ ನ್ಯಾಯಮೂರ್ತಿ ಸಿ.ಬಿ ಸಂತೋಷ್‌ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ ಏನು?

ಮೃತ ಸೌಜನ್ಯ ಧರ್ಮಸ್ಥಳದ ನಿವಾಸಿ ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿ ಪುತ್ರಿ. ಈಕೆಯು ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. 2012ರ ಅಕ್ಟೋಬರ್ 9ರಂದು ಸಂಜೆ ಕಾಲೇಜಿನಿಂದ ಮನೆಗೆ ಬರುತ್ತಿದ್ದಾಗ ಈ ಘಟನೆ ನಡೆದಿತ್ತು. ಮನೆಗೆ ಹೋಗುವಾಗ ನಾಪತ್ತೆಯಾಗಿದ್ದ ಸೌಜನ್ಯ, ಮರು ದಿನ ಧರ್ಮಸ್ಥಳದ ಮಣ್ಣಸಂಕ ಬಳಿ ಶವ ಪತ್ತೆಯಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ದೋಷಮುಕ್ತನಾಗಿರುವ ಸಂತೋಷ್ ರಾವ್ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಿವಾಸಿ. ಸೌಜನ್ಯ ಸಾವಿನ ಬಳಿಕ ಸ್ಥಳೀಯರು ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಈ ಪ್ರಕರಣವನ್ನು ಸಿಐಡಿಗೆ ನೀಡಲಾಗಿತ್ತು. ಬಳಿಕ, ಸಿಬಿಐಗೆ ಕೊಡಲಾಗಿತ್ತು.

RELATED ARTICLES

Related Articles

TRENDING ARTICLES