Wednesday, January 22, 2025

ಲಿಂಗಾಯತರ ಮೇಲೆ ನಿಜವಾದ ಪ್ರೀತಿ ಇದ್ದರೆ ಸಿಎಂ ಮಾಡುತ್ತಿದ್ದಿರಿ : ಬಸವರಾಜ ಬೊಮ್ಮಾಯಿ

ಬೆಂಗಳೂರು : ಲಿಂಗಾಯತರ ಮೇಲೆ ನಿಜವಾದ ಪ್ರೀತಿ ಇದ್ದರೆ ಸಮುದಾಯದ ನಾಯಕರನ್ನೇ ಸಿಎಂ ಮಾಡುತ್ತಿದ್ದಿರಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಲಿಂಗಾಯತ ಸಮುದಾಯವನ್ನು ಯಾವಾಗಲೂ ಗೌರವದಿಂದಲೇ ನೋಡಿಕೊಂಡು ಬಂದಿದೆ ಎಂದು ಹೇಳಿದ್ದಾರೆ.

ಬಿಜೆಪಿ ಎಂಬುವ ಒಂದೇ ಗುಡಿ ಇದ್ದು ಎಲ್ಲರಿಗೂ ಪ್ರವೇಶವಿದೆ. ಬಿಜೆಪಿ ಪಕ್ಷ ರಾಜ್ಯದಲ್ಲಿ ಕಡಿಮೆ ಅವಧಿ ಅಧಿಕಾರ ನಡೆಸಿದೆ. ಆದರೂ ನನ್ನ ಸಮೇತವಾಗಿ ನಾಲ್ವರು ಮುಖ್ಯಮಂತ್ರಿಗಳಲ್ಲಿ ಮೂವರು ಲಿಂಗಾಯತ ಸಮುದಾಯಕ್ಕೆ ಸೇರಿದವರನ್ನು ಮುಖ್ಯಮಂತ್ರಿ ಮಾಡಿರುವುದೇ ಇದಕ್ಕೆ ಸಾಕ್ಷಿ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ವೀರಶೈವ ‘ಲಿಂಗಾಯತ ಮತಗಳ ವಿಭಜನೆ’ ಆಗಿಲ್ಲ : ಯಡಿಯೂರಪ್ಪ

ನಮ್ಮ ವಿಚಾರದಲ್ಲಿ ತಲೆ ಕೆಡಿಸಿಕೊಳ್ಳಬೇಡಿ

ಕಾಂಗ್ರೆಸ್ ಪಕ್ಷ ಕಳೆದ ಮೂವತೈದು ವರ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡದಿರುವುದು ಜಗತ್ತಿಗೆ ಗೊತ್ತು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತವಿದೆ. ಲಿಂಗಾಯತ ಸಮುದಾಯದ ಮೇಲೆ ನಿಜವಾದ ಪ್ರೀತಿ ಇದ್ದರೆ ನೀವು ಲಿಂಗಾಯತ ಸಮುದಾಯದವರನ್ನು ಮುಖ್ಯಮಂತ್ರಿ ಮಾಡುತ್ತಿದ್ದಿರಿ. ನಮ್ಮ ಪಕ್ಷದ ವಿಚಾರದಲ್ಲಿ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಛೇಡಿಸಿದ್ದಾರೆ.

RELATED ARTICLES

Related Articles

TRENDING ARTICLES