Sunday, December 22, 2024

ಆಗಸ್ಟ್ 18ರಂದು ಗೃಹಲಕ್ಷ್ಮೀಯರ ಖಾತೆಗೆ 2000 ರೂ. : ಲಕ್ಷ್ಮಿ ಹೆಬ್ಬಾಳ್ಕರ್

ಚಿಕ್ಕಮಗಳೂರು : ಆಗಸ್ಟ್ 18ರಂದು ಗೃಹಲಕ್ಷ್ಮೀಯರ ಖಾತೆಗೆ 2000 ರೂಪಾಯಿ ಹಣ ಹಾಕಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಗೌರಿಗದ್ದೆ ದತ್ತಾಶ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅಪ್ಲಿಕೇಶನ್ ಹಾಕಲು ಮತ್ತಷ್ಟು ವಿಳಂಬ ಆಗಲಿದೆ. ಆಗಸ್ಟ್ 17 ಅಥವಾ 18ಕ್ಕೆ ಖಂಡಿತ ಹಣ ಅವರ ಖಾತೆ ಸೇರುತ್ತೆ ಎಂದು ಹೇಳಿದ್ದಾರೆ.

ಯೋಜನೆಯ ಬದಲಾವಣೆಯಿಂದ ವಿಳಂಬವಾಗುತ್ತಿದೆ ಅಷ್ಟೇ. ಗೃಹಲಕ್ಷ್ಮೀ ಯೋಜನೆ ಮಹಿಳೆಯರಿಗೆ ಸರಳವಾಗಿ ಸಿಗಬೇಕು. ಹಾಗಾಗಿ, ಕೆಲ ಬದಲಾವಣೆಗಳನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಗ್ರಾಮ 1 ಕರ್ನಾಟಕ, ಬೆಂಗಳೂರು ಒನ್ ನಲ್ಲಿ ಇದರ ಸೇವೆ ಲಾಭ ಪಡೆಯಬಹುದಾಗಿತ್ತು. ಈಗ ಬಾಪೂಜಿ ಸೇವಾ ಕೇಂದ್ರವನ್ನು ಸೇರಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : APL ತೆರಿಗೆದಾರರಿಗೂ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮೀ : ಲಕ್ಷ್ಮಿ ಹೆಬ್ಬಾಳ್ಕರ್

ಕೆಲವು ಬದಲಾವಣೆ ಮಾಡಿದ್ದೇವೆ

ಗ್ರಾಮ ಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರ ಇದೆ. ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಸಕ್ತಿ ಇರೋರಿಗೆ ಪ್ರಜಾಪ್ರತಿನಿಧಿ ಮಾಡುತ್ತೇವೆ. ಅವರಿಗೆ ಯಾವ ಖಾತೆಗೆ ಬೇಕೋ ಅದೇ ಅಕೌಂಟ್ ಗೆ ಹಣ ನೀಡುತ್ತೇವೆ. ನಿನ್ನೆ ಕೆಲವು ಬದಲಾವಣೆ ಮಾಡಿದ್ದೇವೆ. ಅಧಿಕಾರಿಗಳು  ಈಗಾಗಲೇ ಸಾಫ್ಟ್ ವೇರ್ ರೆಡಿ ಮಾಡುತ್ತಿದ್ದಾರೆ. ಅತಿ ಶೀಘ್ರದಲ್ಲಿ ಅಪ್ಲಿಕೇಶನ್ ಡೌನ್ಲೋಡ್ ಮಾಡುವ ಯೋಜನೆಗೆ ಚಾಲನೆ ನೀಡುತ್ತೇವೆ ಎಂದು ಹೇಳಿದ್ದಾರೆ.

.17 ಅಥವಾ 18ರಂದು ಜಾರಿ

ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಆದರೆ, ಆಗಸ್ಟ್ 17 ಅಥವಾ 18ರಂದು ಸಮಾರಂಭ ಎಂದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಜೂನ್ 15 ರಿಂದ ಜುಲೈ 15ರ ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಪ್ರತಿ ಮನೆಯ ಯಜಮಾನಿಗೆ ಗೃಹಲಕ್ಷ್ಮೀ ಯೋಜನಯಡಿ ಮಾಸಿಕ 2,000 ರೂ. ಸಹಾಯಧನ ನೀಡಲಾಗುವುದು.

RELATED ARTICLES

Related Articles

TRENDING ARTICLES