Friday, November 22, 2024

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ  ಮತ್ತಷ್ಟು ವಿಳಂಬ ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸ್ಪಷ್ಟನೆ

ಚಿಕ್ಕಮಗಳೂರು: ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ  ಮತ್ತಷ್ಟು ವಿಳಂಬ ಆಗುತ್ತೆ. ಬಹಳ ಸರಳವಾಗಿ ಗೃಹಲಕ್ಷ್ಮೀ ಯೋಜನೆ ಜನರಿಗೆ ತಲುಪಬೇಕೆಂದು ಯೋಜನೆಯಲ್ಲಿ ಕೆಲವು ಬದಲಾವಣೆಳಗಳನ್ನು ಮಾಡಲಾಗುತ್ತಿದೆ. ಅಧಿಕಾರಿಗಳಿಗೆ ಕೆಲ ಬದಲಾವಣೆ ಮಾಡಲು ಸೂಚನೆ ನೀಡಿದ್ದೇವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ.

ಚಿಕ್ಕಮಂಗಳೂರಿನಲ್ಲಿ ಮಾತನಾಡಿದ ಅವರು ಅರ್ಜಿಯಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ಅರ್ಜಿ ಸ್ವೀಕಾರ ತಡವಾಗುತ್ತದೆ ಎಂದು ಹೇಳಿದ್ದಾರೆ. ಇನ್ನೂ ಸರ್ಕಾರದ ಯೋಜನೆಯನ್ನ ಯಾರು ಮನೆ ಯಜಮಾನಿಗೆ ತಲುಪಿಸಲಿದ್ದು, ಈಗಾಗಲೆ ಅಧಿಕಾರಿಗಳು ಸಾಫ್ಟ್ವೇರ್​​/ಅಪ್ಲಿಕೇಶನ್​ ಅನ್ನು ಅಭಿವೃದ್ಧಿ ಪಡಿಸುತ್ತಿದ್ದಾರೆ. ಅತ್ಯಂತ ಶೀಘ್ರದಲ್ಲೇ ಅರ್ಜಿ ಪ್ರಕ್ರಿಯೆ ಆರಂಭವಾಗುತ್ತದೆ. ಆಗಸ್ಟ್​​​ 17 ಅಥವಾ 18ರಂದು ಮನೆ ಯಜಮಾನಿ ಖಾತೆಗೆ ಹಣ ತಲಪುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ಅಕ್ಕಿ ಕೊಡುವುದರಲ್ಲೂ ಬಿಜೆಪಿ ರಾಜಕಾರಣ ಮಾಡುತ್ತಿದೆ ; ಸಚಿವ ಕೆ.ಹೆಚ್.ಮುನಿಯಪ್ಪ

ಅರ್ಜಿ ಸಲ್ಲಿಕೆಯನ್ನು ಗ್ರಾಮ ಒನ್​, ಕರ್ನಾಟಕ ಒನ್​, ಬೆಂಗಳೂರ್​ ಒನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿತ್ತು. ಅದರೆ ಇದೀಗ ಬಾಪೂಜಿ ಸೇವಾ ಕೇಂದ್ರದಿಂದಲ್ಲೂ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದರು.

 

RELATED ARTICLES

Related Articles

TRENDING ARTICLES