Wednesday, January 22, 2025

ಪ್ರತಾಪ್ ಸಿಂಹಗೆ ಆಸೆ ಇದ್ರೆ ಇನ್ನೊಂದು ಮದುವೆಯಾಗಿ, ಅದರ ಅನುಭವ ಹೇಳಲಿ : ತನ್ವೀರ್ ಸೇಠ್

ಮೈಸೂರು : ಗೃಹಲಕ್ಷ್ಮೀ ಯೋಜನೆ ಜಾರಿಯಿಂದ ಕುಟುಂಬಗಳಲ್ಲಿ ಒಡಕುಂಟಾಗಿದೆ. ಮುಸ್ಲಿಮರಿಗೆ ಎರಡು-ಮೂರು ಹೆಂಡತಿಯರಿರುತ್ತಾರೆ. ಆಗ ಯಾರನ್ನು ಮನೆಯ ಯಜಮಾನಿ ಅಂತ ಗುರುತಿಸುತ್ತೀರಿ ಎಂದಿದ್ದ ಸಂಸದ ಪ್ರತಾಪ್ ಸಿಂಹಗೆ ಶಾಸಕ ತನ್ವೀರ್ ಸೇಠ್ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪ್ರತಾಪ್ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಿ, ಅದರ ಅನುಭವವನ್ನು ನಮಗೆ ಬಂದು ಹೇಳಲಿ ಎಂದು ಟಾಂಗ್ ಕೊಟ್ಟಿದ್ದಾರೆ.

ಅಡ್ಜೆಸ್ಟ್ ಮೆಂಟ್ ಪಾಲಿಟಿಕ್ಸ್ ಬಗ್ಗೆ ಮಾತನಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ಅಡ್ಜೆಸ್ಟ್ ಮೆಂಟ್ ರಾಜಕೀಯ ನನಗೆ ಗೊತ್ತಿಲ್ಲ. ಆ ರೀತಿ ಮಾಡಿರುವವರಿಗೆ ಆ ವಿಚಾರ ಗೊತ್ತು. ಅಡ್ಜೆಸ್ಟ್ ಮೆಂಟ್ ಮಾಡ್ಕೊಂಡು ಒಬ್ಬರನ್ನು ತುಳಿಯಲು ಮತ್ತೊಬ್ಬರನ್ನು ಬಳಸಿಕೊಳ್ಳೋದು ಸರಿಯಲ್ಲ. ಅನುಭವ ಇರುವವರು ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಮುಸ್ಲಿಮರ ಮನೆಯಲ್ಲಿ 2 ಹೆಂಡ್ತಿ, 3 ಹೆಂಡ್ತಿ ಇದ್ದಾರೆ, ಅವರಲ್ಲಿ ಯಜಮಾನಿ ಯಾರು? : ಪ್ರತಾಪ್ ಸಿಂಹ

ನಾನು ಸದನದಲ್ಲಿ ಉತ್ತರಿಸುತ್ತೇನೆ

ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಚಿವ ಸಂಪುಟದಲ್ಲಿ ನಾನಿಲ್ಲ. ಹೀಗಾಗಿ, ಸಂಪುಟ ಸಭೆಯಲ್ಲಿ ಏನು ಚರ್ಚೆಯಾಗಿದೆ ಅಂತ ಗೊತ್ತಿಲ್ಲ. ಮುಂದೆ ಈ ವಿಚಾರ ಸದನದಲ್ಲಿ ಚರ್ಚೆಗೆ ಬಂದಾಗ ಉತ್ತರಿಸುತ್ತೇನೆ ಎಂದು ತಿಳಿಸಿದ್ದಾರೆ.

ಮನುಷ್ಯನ ಆಸೆಗೆ ಕೊನೆಯಿಲ್ಲ

ಸಚಿವ ಸ್ಥಾನ ಸಿಗದಿದ್ದಕ್ಕೆ ನನಗೆ ನಿರಾಸೆಯಾಗಿಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬಂದಿರುವ ಖುಷಿಯಿದೆ. ಮನುಷ್ಯನ ಆಸೆಗೆ ಕೊನೆಯಿಲ್ಲ, 34ಕ್ಕೆ 34 ಸಚಿವ ಸ್ಥಾನಗಳು ಭರ್ತಿಯಾಗಿವೆ. ಅಧಿಕಾರ ಹಂಚಿಕೆ ಸಂಬಂಧ ನಡೆದಿರುವ ಗೌಪ್ಯ ಸಭೆಯ ಬಗ್ಗೆಯೂ ನನಗೆ ಗೊತ್ತಿಲ್ಲ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

RELATED ARTICLES

Related Articles

TRENDING ARTICLES