ಬೆಂಗಳೂರು: ಕಾಂಗ್ರೆಸ್ ಸರ್ಕಾರದ(Congress Government) 5ಗ್ಯಾರಂಟಿಗಳಲ್ಲೊಂದಾದ ಆದ ಅನ್ನಭಾಗ್ಯ ಯೋಜನೆ(Anna Bhagya Scheme) ಇದೇ ಜುಲೈ 1 ರಂದು ಜಾರಿ ಮಾಡಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸುತ್ತಿದ್ದಾರೆ.
ಹೌದು,ರಾಜ್ಯದಲ್ಲಿ ಅಕ್ಕಿ ರಾಜಕೀಯ ಶುರುವಾಗಿದ್ದು, ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ(Central Government) ನಿರಾಕರಿಸಿದೆ. ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.ಹೀಗಾಗಿ ಜುಲೈ 1ರಂದು ಈ ಯೋಜನೆ ಜಾರಿಯಾಗುವುದು ಬಹುತೇಕ ಅನುಮಾನವಾಗಿದೆ.
ಇದನ್ನೂ ಓದಿ: ಆಡಳಿತ ಯಂತ್ರಕ್ಕೆ ಸರ್ಜರಿ : ಐದು ಮಂದಿಗೆ ಜಿಲ್ಲಾಧಿಕಾರಿ ಭಾಗ್ಯ
ಇನ್ನೂ ಸಿಎಂ ಸಿದ್ದರಾಮಯ್ಯ(Siddaramaiah) ತೆಲಂಗಾಣದ ಸಿಎಂಗೆ ಕರೆ ಮಾಡಿ ಅಕ್ಕಿ ಪೂರೈಕೆಗೆ ಮನವಿ ಮಾಡಿದ್ದಾರೆ.
ಅನ್ನಭಾಗ್ಯ ಯೋಜನೆಗೆ ಇದೆ ಗ್ರೀನ್ ಸಿಗ್ನಲ್ ಸಿಗುತ್ತಾ…?
ಅಕ್ಕಿ ಸಮಸ್ಯೆ ನಿವಾರಿಸಲು ರಾಜ್ಯ ಆಹಾರ ಇಲಾಖೆ ಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಛತ್ತೀಸ್‌ಘಡ್, ಮಧ್ಯಪ್ರದೇಶ ರಾಜ್ಯಗಳನ್ನ ಸಂಪರ್ಕ ಮಾಡಿದೆ. ಆಹಾರ ಇಲಾಖೆ ಪ್ರಧಾನ ಕಾರ್ಯದರ್ಶಿ ದೂರವಾಣಿ ಮೂಲಕ ಅಕ್ಕಿಯ ದರ ಹಾಗೂ ಎಕ್ಸಸ್, ಟ್ರಾನ್ಸ್ ಪೋರ್ಟ್ ಚಾರ್ಜ್ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಈ ಕುರಿತು ಸಿಎಂ ಸಿದ್ದರಾಮಯ್ಯಗೆ ಮಾಹಿತಿ ನೀಡಿದ್ದಾರೆ.
ತೆಲಂಗಾಣ ಸಿಎಂ ಕರೆ ಮಾಡಿದ್ದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ತೆಲಂಗಾಣ ಸಿಎಂಗೆ ಕರೆ ಮಾಡಿ ಅಕ್ಕಿ ಪೂರೈಕೆಗೆ ಮನವಿ ಮಾಡಿದ್ದಾರೆ. ಬಗ್ಗೆ ಸ್ವತಂ ತೆಲಂಗಾಣ ಸಿಎಂ ಮಾಹಿತಿ ನೀಡಿದ್ದಾರೆ.ನಿನ್ನೆಯಷ್ಟೇ ನನ್ನ ಜೊತೆಗೆ ಕರ್ನಾಟಕದಲ್ಲಿ ನೂತನವಾಗಿ ಆಯ್ಕೆಯಾದ ಮುಖ್ಯಮಂತ್ರಿಗಳ ಫೋನ್ ಬಂದಿತ್ತು. ಚಂದ್ರಶೇಖರ್ ರಾವ್‌ಜೀ ನಮಗೆ 27 ಲಕ್ಷ ಟನ್ ಅಕ್ಕಿ ಬೇಕಾಗಿದೆ. ನಿಮ್ಮ ಬಳಿ ಇದ್ರೆ ದರ ಹೇಳಿ ನಾವು ಖರೀದಿಸುತ್ತೇವೆ ಎಂದ್ರು ಎಂದು ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಅವರು ನಾಗ್ಪುರದಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.