Monday, May 20, 2024

ಬಿಜೆಪಿಯವರನ್ನ ಕೇಳಿಕೊಂಡು ನಾವು ಆಡಳಿತ ಮಾಡಬೇಕೇ? : ಡಾ.ಜಿ ಪರಮೇಶ್ವರ್

ಬೆಂಗಳೂರು : ಬಿಜೆಪಿಯವರನ್ನ ಕೇಳಿಕೊಂಡು ನಾವು ಆಡಳಿತ ಮಾಡಬೇಕೇ? ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಕ್ಕಿ ಪೂರೈಕೆ ತಿಕ್ಕಾಟ ವಿಚಾರ ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ನಾವು ಈಗಾಗಲೇ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೇವೆ. ಅದರಂತೆ ಉಚಿತ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ ಎಂದು ಹೇಳಿದ್ದಾರೆ.

ಎಷ್ಟೇ ಕಷ್ಟವಾದರೂ ಗ್ಯಾರಂಟಿ ಜಾರಿಗೊಳಿಸುತ್ತೇವೆ. ಬಿಜೆಪಿಯವರನ್ನ ಕೇಳಿಕೊಂಡು ಅಧಿಕಾರ ಮಾಡಲು ಆಗುವುದಿಲ್ಲ. ಜನಪರ ಆಡಳಿತ ಕೊಡುವ ವಿಚಾರವಾಗಿ ರಾಜಿ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಮರಳು ಮಾಫಿಯಾ ತಲೆ ಎತ್ತಿದೆ ಎಂಬ ಬಿಜೆಪಿ ಆರೋಪ ವಿಚಾರ ಪ್ರತಿಕ್ರಿಯಿಸಿ, ಬಿಜೆಪಿಯವರ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದ ಅಗತ್ಯವಿಲ್ಲ. ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡುತ್ತೇವೆ ಎಂದು ಕುಟುಕಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ಸರ್ಕಾರ ‘ಮರಳಿ ದಂಧೆಗೆ’ ಇಳಿದಿದೆ : ಶಾಸಕ ಯತ್ನಾಳ್

ಸಂವಿಧಾನವೇ ಭಗವದ್ಗೀತೆ, ಖುರಾನ್

ಬಿಜೆಪಿಯವರು ಈಗ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಮಾತನ್ನಾಡುತ್ತಿದ್ದಾರೆ. ದೇಶದ ಆಡಳಿತ ವ್ಯವಸ್ಥೆಯಲ್ಲಿ ಸಂವಿಧಾನವೇ ಭಗವದ್ಗೀತೆ, ಬೈಬಲ್, ಖುರಾನ್. ಸಂವಿಧಾನ ಭಾರತೀಯರಿಗೆ ಗ್ರಂಥ ಇದ್ದಂತೆ. ಕಲಂ 25ರಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಗೂ ಧರ್ಮ ಆಯ್ಕೆಯ ಹಕ್ಕು ನೀಡಿದೆ. ಅದಕ್ಕೆ ವಿರುದ್ಧವಾಗಿ ಬಿಜೆಪಿಯವರು ಮತಾಂತರ ನಿಷೇಧ ಕಾಯ್ದೆ ಮಾಡಿದ್ದರು ಎಂದು ಹೇಳಿದ್ದಾರೆ.

ಈಗ ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಿದೆ

ಮತಾಂತರ ನಿಷೇಧ ಕಾಯ್ದೆ ಸಂವಿಧಾನಕ್ಕೆ ವಿರುದ್ಧವಾಗಿದೆ ಅಂತ ನಾವು ಅಂದೇ ಹೇಳಿದ್ದೆವು. ಸದನದಲ್ಲಿ ಮಸೂದೆ ಮಂಡಿಸಿದ ವೇಳೆಯೇ ಹೇಳಿದ್ದೆವು. ಈಗ ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಿದೆ. ನಮ್ಮ ಸರ್ಕಾರಕ್ಕೆ ಸಂವಿಧಾನದ ಮೇಲೆ ನಂಬಿಕೆ ಇದೆ. ಹಾಗಾಗಿ, ನಾವು ಮತಾಂತರ ನಿಷೇಧ ಕಾಯ್ದೆಯನ್ನು ಹಿಂತೆಗೆದುಕೊಳ್ಳತ್ತಿದ್ದೇವೆ ಎಂದು ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES