ಶಿವಮೊಗ್ಗ: ಅನ್ನಭಾಗ್ಯ ಯೋಜನೆಯಡಿಯಲ್ಲಿ ನೀವು ಜನರಿಗೆ ಕೊಡುವ ಅಕ್ಕಿಯಲ್ಲಿ ಒಂದು ಗ್ರಾಂ ಕೂಡ ಕಡಿಮೆಯಾಗಬಾರದು ಅದ್ರೆ ನಿಮ್ಮನ್ನ ಜನ ಸುಮ್ಮನೆ ಬಿಡುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ಕೊಟ್ಟಿದ್ದಾರೆ.
ಹೌದು, ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮ ಭರವಸೆಯ ಗ್ಯಾರಂಟಿಗಳನ್ನೂ ಜನರಿಗೆ ನೀಡಿ ಯಾಕೆ ಮೀನಾವೇಷ ಏಣಿಸುತ್ತೀರಾ..? ಕೇಂದ್ರ ಸರ್ಕಾರದ ಮೇಲೆ ಗೊಬೆ ಕೂರಿಸುವುದನ್ನು ಬಿಟ್ಟು ಮೊದಲು ನೀವು ಕೊಡಬೇಕಾದ ಯೋಜನೆಯ ಕಡೆಗೆ ಗಮನಹರಿಸಿ ಎಂದು ರಾಜ್ಯ ಸರ್ಕಾರವನ್ನ ಟೀಕಿಸಿದ್ದಾರೆ.
ಇದನ್ನೂ ಓದಿ : ಸದನ ಆರಂಭವಾಗುವುದರೊಳಗೆ ವಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ : ಬಿಎಸ್ ಯಡಿಯೂರಪ್ಪ
ರಾಜ್ಯದ ಜನರಿಗೆ ಕೇಂದ್ರ ಸರ್ಕಾರದಿಂದ ಪಡಿತರ ವ್ಯವಸ್ಥೆ ಮೂಲಕ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ 5 ಕೆ.ಜಿ ಅಕ್ಕಿ ಉಚಿತವಾಗಿ ಕೊಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಹೆಚ್ಚುವರಿಯಾಗಿ ಕೊಡುವುದಾಗಿ ಹೇಳಿದ್ದ 10 ಕೆ.ಜಿ ಅಕ್ಕಿಯನ್ನು ಕೊಡಲು ಕೇಂದ್ರ ಸರ್ಕಾರ ಒಪ್ಪಿರಲಿಲ್ಲ. ಆ ಅಕ್ಕಿ ಹೊಂದಿಸಿಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಅವರು (ರಾಜ್ಯ ಸರ್ಕಾರ) ಎಲ್ಲಿಯಾದ್ರೂ ಖರೀದಿ ಮಾಡಿಕೊಡಲಿ ಎಂದರು.
ಒಂದು ಗ್ರಾಂ ಕಡಿಮೆಯಾದರೂ ರಾಜ್ಯದ ಜನರು ಒಪ್ಪಲ್ಲ.
ಕಾಂಗ್ರೆಸ್ ನಾಯಕರು 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ಚುನಾವಣೆಗೆ ಮುನ್ನ ಭರವಸೆ ಕೊಟ್ಟಿದ್ದರು. ಅದರಂತೆ ಅಷ್ಟೂ ಅಕ್ಕಿ ವಿತರಣೆ ಮಾಡಬೇಕು. ಒಂದು ಗ್ರಾಂ ಕಡಿಮೆಯಾದರೂ ರಾಜ್ಯದ ಜನರು ಒಪ್ಪಲ್ಲ. ಅವರು ಕೊಟ್ಟ ಭರವಸೆ ಈಡೇರಿಸಬೇಕು ಎಂದು ಯಡಿಯೂರಪ್ಪ ಕಿಡಿಕಾರಿದ್ದಾರೆ.
ಅಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಗೊಂದಲ ಸೃಷ್ಟಿಸಿದೆ
ಅಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತಿದೆ. ಹೆಚ್ಚುವರಿಯಾಗಿ ಅಕ್ಕಿ ಕೊಡಲು ಕೇಂದ್ರ ಒಪ್ಪಿರಲಿಲ್ಲ. ಅದು ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದ್ರೂ ಖರೀದಿ ಮಾಡಿ ಕೊಡಲಿ ಎಂದು ಕಿಡಿಕಾರಿದರು.