Wednesday, January 22, 2025

ಖುಷ್ಭೂ ಹಳೇ ಪಾತ್ರೆ ಹೇಳಿಕೆ : ಡಿಎಂಕೆ ನಾಯಕ ಶಿವಾಜಿ ಕೃಷ್ಣಮೂರ್ತಿ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ನಟಿ ಹಾಗೂ ಬಿಜೆಪಿ ನಾಯಕಿ ಖುಷ್ಭೂ ಸುಂದರ್‌ ಹಳೇ ಪಾತ್ರೆ ಎಂದು ಹೇಳಿಕೆ ನೀಡಿದ್ದ ಡಿಎಂಕೆ ಪಕ್ಷದ ವಕ್ತಾರ ಶಿವಾಜಿ ಕೃಷ್ಣಮೂರ್ತಿ ಪಕ್ಷದಿಂದ ಕಿಕ್ ಔಟ್ ಆಗಿದ್ದಾರೆ.

ಖುಷ್ಭೂ ಸುಂದರ್‌ ಹಳೇ ಪಾತ್ರೆ ಎಂಬ ಹೇಳಿಕೆ ವಿವಾದ ಎಬ್ಬಿಸಿತ್ತು. ಆಡಳಿತಾರೂಢ ಡಿಎಂಕೆ ಪಕ್ಷದ ವಕ್ತಾರ ಶಿವಾಜಿ ಕೃಷ್ಣಮೂರ್ತಿ ವಿರುದ್ಧ ನಟಿ ಖುಷ್ಭೂ ಹಾಗೂ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದರು.

ಶಿವಾಜಿ ಕೃಷ್ಣಮೂರ್ತಿ ಹೇಳಿಕೆಗೆ ನಟಿ ಖುಷ್ಭೂ ಸುಂದರ್‌ ವಿರೋಧ ವ್ಯಕ್ತಪಡಿಸಿದ್ದರು. ಈ ವಿಚಾರವನ್ನು ಸುಮ್ಮನೆ ಬಿಡುವುದಿಲ್ಲ. ನಿಮಗೆ ನೋವಾಗಿದೆ ಅಂತ ಅನಿಸಬೇಕು, ಅಲ್ಲಿಯವರೆಗೆ ಇದನ್ನು ತೆಗೆದುಕೊಂಡು ಹೋಗುತ್ತೇನೆ. ಶಿವಾಜಿ ಕೃಷ್ಣಮೂರ್ತಿ ಹೇಳಿಕೆ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದರು.

ಮಹಿಳಾ ನಿಂದಕರೇ ಹೆಚ್ಚು

ಕೃಷ್ಣಮೂರ್ತಿ ಅವರ ಹೇಳಿಕೆ ವೀಡಿಯೊ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದರು. ಈತನ ಕ್ರೂರ ಮಾತುಗಳು ಡಿಎಂಕೆ ಪಕ್ಷ ರಾಜಕೀಯ ಸಂಸ್ಕೃತಿ ತೋರಿಸುತ್ತದೆ. ಡಿಎಂಕೆಯಲ್ಲಿ ಹಲವು ಮಹಿಳಾ ನಿಂದಕರಿದ್ದಾರೆ. ಮಹಿಳೆಯರ ಬಗ್ಗೆ ಕೆಟ್ಟದಾಗಿ ಹೇಳಿಕೆ ನೀಡುವುದು ಡಿಎಂಕೆಯಲ್ಲಿ ಹೆಚ್ಚಾಗುತ್ತಿದೆ. ಇಂತಹ ಹೇಳಿಕೆಗಳನ್ನು ನೀಡುವವರಿಗೆ ಡಿಎಂಕೆ ಪ್ರೋತ್ಸಾಹ ನೀಡುತ್ತದೆ ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ : ಒಬ್ಬ ಕಳ್ಳ, ಮತ್ತೊಬ್ಬ ಮಳ್ಳ.. ಇಂಥವರನ್ನು ಹಿಂದೆ ನೋಡಿರಲಿಲ್ಲ : ಕೆ.ಎಸ್ ಈಶ್ವರಪ್ಪ

ಪಕ್ಷದ ಎಲ್ಲ ಹುದ್ದೆಗಳಿಂದ ವಜಾ

ಈ ಹೇಳಿಕೆ ವಿವಾದ ಸೃಷ್ಟಿಸುವ ಸೂಚನೆ ಅರಿತ ಡಿಎಂಕೆ ಪ್ರಧಾನ ಕಾರ್ಯದರ್ಶಿ ದುರೈಮುರುಗನ್, ಶಿವಾಜಿ ಕೃಷ್ಣಮೂರ್ತಿಯನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ಪಕ್ಷದ ಶಿಸ್ತು ಉಲ್ಲಂಘಿಸಿ ಅಪಖ್ಯಾತಿ ತಂದಿದ್ದಕ್ಕಾಗಿ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಪಕ್ಷದ ಎಲ್ಲ ಹುದ್ದೆಗಳಿಂದ ವಜಾಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಘಟನೆ ಹಿನ್ನೆಲೆ ಏನು?

ನಟಿ ಹಾಗೂ ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಬಗ್ಗೆ ಡಿಎಂಕೆ ಪಕ್ಷದ ವಕ್ತಾರ ಶಿವಾಜಿ ಕೃಷ್ಣಮೂರ್ತಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಶಿವಾಜಿ ಕೃಷ್ಣಮೂರ್ತಿ ಅವರು ಖುಷ್ಬೂ ಸುಂದರ್ ಅವರಿಗೆ ಹಳೆಯ ಪಾತ್ರೆ ಎಂದಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು.

RELATED ARTICLES

Related Articles

TRENDING ARTICLES