Friday, September 20, 2024

ಇಂದಿನಿಂದ ಉಚಿತ ವಿದ್ಯುತ್‌ಗೆ ಅರ್ಜಿ ಸಲ್ಲಿಕೆ ಆರಂಭ ; ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಬೆಂಗಳೂರು: ಕಾಂಗ್ರೆಸ್​ ಗ್ಯಾರಂಟಿಯಲ್ಲೊಂದು ಆದ ಗೃಹಜ್ಯೋತಿಗೆ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭವಾಗಲಿದೆ.

ಹೌದು, ನಗರದ ಎಂ.ಜಿ ರಸ್ತೆಯ ಬೆಸ್ಕಾಂ ಪ್ರಾದೇಶಿಕ ಕಚೇರಿಯಲ್ಲಿ ಇಂದು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಉಚಿತ 200 ಯೂನಿಟ್ ಎನ್ನುವ ಬೋರ್ಡ್ ಹಾಕಿರುವ ಸಿಬ್ಬಂದಿ, ಎರಡು ಕಂಪ್ಯೂಟರ್ ಇಟ್ಟು, ಎರಡು ಕೌಂಟರ್ ತೆರೆಯಲು ರೆಡಿ ಮಾಡಿಕೊಳ್ಳಲಾಗಿದೆ.

ಜೊತೆಗೆ ಏನೇನು ದಾಖಲೆಗಳು ಬೇಕು, ಹೇಗೆ, ಎಲ್ಲಿ ಅಪ್ಲೋಡ್ ಮಾಡಬಹುದು ಎನ್ನುವುದರ ಬಗ್ಗೆ ಸಂಪೂರ್ಣ ವಿವರಗಳು ಆ ಬೋರ್ಡ್​ನಲ್ಲಿದೆ. ಇನ್ನೂ ಈ ಯೋಜನೆಗೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಲಿದ್ದಾರೆ.

‘ಗೃಹಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ?

ಇಂದಿನಿಂದ ‘ಗೃಹಜ್ಯೋತಿ’ ಅರ್ಜಿ ಸಲ್ಲಿಕೆ ಆರಂಭ ಆಗಲಿದೆ. ನೀವು ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಇನ್ನು ಸೇವಾ ಸಿಂಧು ವೆಬ್‌ಸೈಟ್‌ ಬಳಸಿ ಮೊಬೈಲ್, ಕಂಪ್ಯೂಟರ್, ಲ್ಯಾಪ್​ಟಾಪ್​ನಲ್ಲೂ ಅರ್ಜಿ ಸಲ್ಲಿಸಬಹುದು. ಅಷ್ಟೇ ಅಲ್ಲ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂಚಾಯ್ತಿ ಕಚೇರಿ, ವಿದ್ಯುತ್​ ಕಚೇರಿಯಲ್ಲೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಏನೆಲ್ಳಾ ದಾಖಲೆಗಳು ಬೇಕು..? 

ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಆರ್​ಆರ್ ನಂಬರ್, ಮೊಬೈಲ್ ಸಂಖ್ಯೆ ಅವಶ್ಯಕತೆ ಇದೆ. ಇನ್ನು  ಬಾಡಿಗೆದಾರರಾಗಿದ್ದರೆ, ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದು. ಸಮಸ್ಯೆ ಇದ್ದರೆ ಹೆಚ್ಚಿನ ಮಾಹಿತಿಗಾಗಿ 1912 ಸಹಾಯವಾಣಿ ಸಂಖ್ಯೆಗೆ ಕಾಲ್‌ ಮಾಡಿ ಮಾಹಿತಿ ಪಡೆಯಬಹುದು.

RELATED ARTICLES

Related Articles

TRENDING ARTICLES