ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಕಿದ್ದಾರೆ.
ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತಾ ಕುಂಟು ನೆಪ ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಇದೀಗ ಛತ್ತೀಸಗಢದಿಂದ ಅಕ್ಕಿ ತರ್ತೀವಿ ಅಂತಿದ್ದಾರೆ. ನಮಗೆ ಬಡ ಜನರಿಗೆ ಒಳ್ಳೆದಾದ್ರೆ ಸಾಕು. ಎಲ್ಲಿಂದ ತಗೋಬೇಕು, ಹೇಗೆ ತಗೊಬೇಕು ಅನ್ನೋ ಪ್ರಶ್ನೆಯಿದೆ. ರಾಜ್ಯದ ರೈತರು ಅಕ್ಕಿ ಕೊಡೋಕೆ ಮುಂದೆ ಬಂದ್ರೆ ಅದನ್ನು ಖರೀದಿ ಮಾಡಬೇಕು ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿ : ಸದನ ಆರಂಭವಾಗುವುದರೊಳಗೆ ವಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ : ಬಿ.ಎಸ್ ಯಡಿಯೂರಪ್ಪ
ಅಕ್ಕಿ ಕೊಡದೆ ಹೋದ್ರೆ ನಾವು ಪ್ರತಿಭಟನೆ
ಬಿಜೆಪಿಯವರೇ ಅಕ್ಕಿ ಕೊಡಿಸಲಿ ಅನ್ನೋದು ಸರಿ ಅಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಕಳೆದ ವಾರ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತಂದಿದ್ದೇನೆ. ಅಕಸ್ಮಾತ್ ಒಂದನೇ ತಾರೀಖಿಗೆ ಅಕ್ಕಿ ಕೊಡದೆ ಹೋದ್ರೆ ನಾವು ಪ್ರತಿಭಟನೆ ಮಾಡ್ತೀವಿ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಈ ಸರ್ಕಾರ ತಗೊಂಡು ಏನು ಮಾಡ್ಬೇಕು
ರಾಜ್ಯದಲ್ಲಿ ಬರಗಾಲ ಇದೆ. 500 ಹಳ್ಳಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಸರ್ಕಾರ ಇದನ್ನು ಗಂಬೀರವಾಗಿ ಪರಿಗಣಿಸುತ್ತಿಲ್ಲ. ಕೇವಲ ವಿಡಿಯೋ ಕಾನ್ಫರೆನ್ಸ್ ಮಾಡಿ ಸುಮ್ಮನಾಗಿದೆ. ಬರಗಾಲ ಇದ್ದ ಕಡೆ ಟಾಸ್ಕ್ ಪೋರ್ಸ್ ರಚನೆ ಮಾಡಬೇಕು. ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದ್ರೆ ಸರ್ಕಾರದ ಜನ ಪ್ರೀಯತೆ ಬಹಳ ದಿನ ಉಳಿಯಲ್ಲ. ನೀರು ಕೊಡದ ಸರ್ಕಾರ ತೆಗೆದುಕೊಂಡು ಏನು ಮಾಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.