ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿಯಲ್ಲಿ ರಾಜ್ಯದ ಜನರಿಗೆ ನೀಡಲು ರಾಜ್ಯ ಸರ್ಕಾರ ಕೇಂದ್ರದ ಮೊರೆ ಹೋಗಿತ್ತು. ಅಂದ್ರೆ ಇದೀಗ ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ಮಾಡುತ್ತಿದ್ದು, ಹಾಗಾಗಿ ಕೇಂದ್ರದ ನಡೆ ಖಂಡಿಸಿ ನಾಳೆ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಹೌದು, ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಕ್ಕಿವಿಚಾರವಾಗಿ ನಾವು ನಾಳೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ. ಪ್ರತಿಭಟನೆಯಲ್ಲಿ ನಾನು ಭಾಗಿಯಾಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಅನ್ನ ಭಾಗ್ಯ ಯೋಜನೆ ಅಕ್ಕಿ ಪೂರೈಕೆಗೆ ಕೇಂದ್ರ ನಿರಾಕರಣೆ
ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಯೋಜನೆ ಒಂದಾಗಿದೆ. ಜುಲೈ 1 ರಂದು ಅನ್ನಭಾಗ್ಯ ಯೋಜನೆ ಆರಂಭ ಮಾಡಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ಆದರೆ ಇದೀಗ ಕೇಂದ್ರದಿಂದ ಅಕ್ಕಿ ಕೊಡಲು ನಿರಾಕರಿಸಲಾಗಿದೆ.
ಇದನ್ನೂ ಓದಿ: ವಾರದಲ್ಲೇ 3 ಕೋಟಿ ಮಹಿಳೆಯರ ಫ್ರೀ ಪ್ರಯಾಣ : ಸರ್ಕಾರದ ಬೊಕ್ಕಸಕ್ಕೆ ನಷ್ಟವಾದ ದುಡ್ಡು ಎಷ್ಟು?
ಇನ್ನೂ 13 ರಂದು ಕಳುಹಿಸಿದ ಪತ್ರದಲ್ಲಿ ನಮ್ಮ ಬಳಿ 15 ಲಕ್ಷ ಮೆಟ್ರಿಕ್ ಟನ್ ಅಕ್ಕಿಯಿದೆ. ಅದನ್ನು ಲಿಕ್ವಿಡೇಟ್ ಮಾಡಲು ಖಾಸಗಿಯವರಿಗೆ ಬಿಡುಗಡೆ ಮಾಡಿ.13 ರಂದು ಮತ್ತೊಂದು ಪತ್ರವನ್ನು ಕಳಿಸಿ ಅದೇ ದರದಲ್ಲಿ ಅಕ್ಕಿ ಖರೀದಿ ಮಾಡಲು ರಾಜ್ಯಗಳಿಗೆ ಬಿಡುಗಡೆ ಮಾಡಬೇಡಿ ಅಂತಾ ತಿಳಿಸಿದ್ದಾರೆ.