Sunday, December 22, 2024

ವಾಹನ ಕಳ್ಳರ ಬಂಧನ : ಲಕ್ಷಾಂತರ ಮೌಲ್ಯದ ವಾಹನ, ಚಿನ್ನಾಭರಣ ವಶ

ಬೀದರ್ : ಬೀದರ್ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ವಾಹನ ಹಾಗೂ ಚಿನ್ನಾಭರಣ ದೋಚುತ್ತಿದ್ದ ಮೂವರು ವಾಹನ ಕಳ್ಳರನ್ನು ಹೆಡೆಮುರಿ‌ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳಿಂದ ಒಟ್ಟು 7 ಲಕ್ಷ ಮೌಲ್ಯದ ಸ್ವಿಪ್ಟ್ ಡಿಜೈರ್ ಕಾರು ಹಾಗೂ 10 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ನ್ಯೂ ಟೌನ್ ಪೊಲೀಸ್ ಠಾಣೆ, ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ, ಕಳ್ಳತನವಾಗಿದ್ದ 10 ಬೈಕ್ ಹಾಗೂ ಒಂದು ಕಾರು ಕಳ್ಳತನ ಪ್ರಕರಣ ಪತ್ತೆ ಹಚ್ಚಿದ್ದಾರೆ. ಪ್ರಕರಣ ಬೇಧಿಸಿದ ಪೊಲೀಸರಿಗೆ ಎಸ್ಪಿ ಚನ್ನಬಸವಣ್ಣ ಲಂಗೋಟಿ ಬಹುಮಾನ ಘೋಷಿಸಿದ್ದಾರೆ.

ಇದನ್ನೂ ಓದಿ : ಉದ್ಯಮಿ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ ಕದ್ದ ಕಳ್ಳರ ಬಂಧನ

ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾರು ಕಳ್ಳತನ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆಗ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಮಾಹಿತಿ ಸಿಕ್ಕಿದೆ. ಇನ್ನಷ್ಟು ವಿಚಾರಣೆ ಮಾಡಿದಾಗ ಮಾರ್ಕಟ್ ಠಾಣೆ ವ್ಯಾಪ್ತಿಯಲ್ಲಿ 2 ಬೈಕ್, ತೆಲಂಗಾಣದ ಜಹೀರಾಬಾದ್‌ನಲ್ಲಿ 2 ಬೈಕ್ ಹಾಗೂ ಮನ್ನಾಏಖೇಳ್ಳಿಯಲ್ಲಿ 3 ಮೊಬೈಲ್ ಕದ್ದಿರೊದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿತನಿಂದ ಒಟ್ಟು 3 ಲಕ್ಷ 36 ಸಾವಿರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಾರ್ಕೆಟ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಪ್ರಕರಣ ಬೇದಿಸಿದ ಪೊಲೀಸರು, ಆರೋಪಿತನಿಂದ 2. 53 ಲಕ್ಷ ಮೌಲ್ಯದ ಒಟ್ಟು 6 ಬೈಕ್ ವಶಪಡಿಸಿಕೊಂಡಿದ್ದಾರೆ. ಇನ್ನು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ದರೋಡೆ ಮಾಡಿದ್ದ ಮೂವರು ಆರೋಪಿಗಳನ್ನು ಪತ್ತೆ ಹಚ್ಚಿ, ಬಂಗಾರದ ಚೈನ್, ಉಂಗುರು, ಕಿವಿಯೋಲೆ ಸೇರಿ 1.9 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES