Wednesday, May 22, 2024

ಬಿ.ಎಲ್ ಸಂತೋಷ್ ಬುಟ್ಟಿಯಲ್ಲಿ ಬಹಳಷ್ಟು ಚೇಳುಗಳಿವೆ : ಎಂ.ಬಿ ಪಾಟೀಲ್

ಬೆಂಗಳೂರು: ಪ್ರತಾಪ್ ಸಿಂಹ (Pratap Simha) ಅವರಿಗೆ ಚೇಲಾಗಿರಿ ಮಾಡಿ ಅನುಭವವಿರಬೇಕು ಇವರು ಚೇಲಾ ಅಂತಾರೆ, ಬಿ.ಎಲ್ ಸಂತೋಷ್ (BL Santhosh) ಚೇಳು ಅಂತಾರೆ. ಬಹುಶಃ ಸಂತೋಷ್ ಬುಟ್ಟಿಯಲ್ಲಿ ಇಂಥ ಚೇಳುಗಳೇ ಬಹಳಷ್ಟು ಇವೆ  ಎಂದು ಸಚಿವ ಎಂ.ಬಿ ಪಾಟೀಲ್ (MB Patil) ವಾಗ್ದಾಳಿ ನಡೆಸಿದ್ದಾರೆ.

ಹೌದು, ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರತಾಪ್ ಸಿಂಹ ಅವರಿಗೆ ಚೇಲಾಗಿರಿ ಮಾಡಿ ರೂಢಿ ಇರಬೇಕು. ನಾನು ಕಾಂಗ್ರೆಸ್ ‌ಪಕ್ಷದ ಚೇಲಾ, ಬೇರೆ ಯಾರಿಗೂ ಚೇಲಾ ಅಲ್ಲ. ಪ್ರತಾಪ್ ಸಿಂಹಗೆ ಚೇಲಾ ಕೆಲಸ ಮಾಡಿದ ಅನುಭವ ಇರಬೇಕು ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಚೇಲಾಗಿರಿ ಮಾಡಿ ಪ್ರತಾಪ್ ಸಿಂಹಗೆ ಅನುಭವವಿರಬೇಕು: ಎಂ.ಬಿ ಪಾಟೀಲ್​ 

ಬಿ.ಎಲ್ ಸಂತೋಷ್ ಬುಟ್ಟಿಯಲ್ಲಿ ಇಂತಹ ಚೇಳುಗಳೇ ಬಹಳ ಇರಬೇಕು

 ಪ್ರತಾಪ್ ಸಿಂಹ ಅವರಿಗೆ ಚೇಲಾಗಿರಿ ಮಾಡಿ ರೂಢಿ ಇರಬೇಕು. ಇವರು ಚೇಲಾ ಅಂತಾರೆ, ಬಿ.ಎಲ್ ಸಂತೋಷ್  ಚೇಳು ಅಂತಾರೆ. ಬಹುಶಃ ಸಂತೋಷ್ ಬುಟ್ಟಿಯಲ್ಲಿ ಇಂಥ ಚೇಳುಗಳೇ ಬಹಳ ಇರಬೇಕು. ಇವತ್ತು ಅವರಿಗೆ ಕಡಿಯಿರಿ, ನಾಳೆ ಇವರಿಗೆ ಕಡಿಯಿರಿ ಅಂತ ಸಂತೋಷ್ ಚೇಳು ಬಿಡುತ್ತಾರೆ ಅನಿಸುತ್ತದೆ. ಎಂದು ಟೀಕಿಸಿದ್ದಾರೆ.

 

 

 

RELATED ARTICLES

Related Articles

TRENDING ARTICLES