Friday, November 22, 2024

ಅಕ್ಕಿ ನಿರಾಕರಿಸಿದ ಕೇಂದ್ರ ಸರ್ಕಾರದ ವಿರುದ್ಧ ಇಂದು ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಅನ್ನಭಾಗ್ಯ ಯೋಜನೆ ಜಾರಿಗೆ ಅಕ್ಕಿ ವಿತರಿಸದ ಕೇಂದ್ರ ಸರ್ಕಾರದ ವಿರುದ್ಧ ಇಂದು ಜಿಲ್ಲಾಯ  ಎಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್​ ಪ್ರತಿಭಟನೆಯ ಸಮರ ನಡೆಸಲಿದೆ.

ಹೌದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಇಂದು ಫ್ರೀಡಂಪಾರ್ಕ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ಮಾಡಲಿದೆ.

ಕಾಂಗ್ರೆಸ್​ ನಾಯಕರು ಪ್ರತಿಭಟನೆ ನಡೆಸಲಿದ್ದು,ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ,  ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ಹಾಗೂ ಕಾಂಗ್ರೇಸ್​  ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

ಅನ್ನ ಭಾಗ್ಯ ಯೋಜನೆ ಅಕ್ಕಿ ಪೂರೈಕೆಗೆ ಕೇಂದ್ರ ನಿರಾಕರಣೆ

ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಯೋಜನೆ ಒಂದಾಗಿದೆ. ಜುಲೈ 1 ರಂದು ಅನ್ನಭಾಗ್ಯ ಯೋಜನೆ ಆರಂಭ ಮಾಡಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ಆದರೆ ಇದೀಗ ಕೇಂದ್ರದಿಂದ ಅಕ್ಕಿ ಕೊಡಲು ನಿರಾಕರಿಸಲಾಗಿದೆ.

ಇದನ್ನೂ ಓದಿ: ವಾರದಲ್ಲೇ 3 ಕೋಟಿ ಮಹಿಳೆಯರ ಫ್ರೀ ಪ್ರಯಾಣ : ಸರ್ಕಾರದ ಬೊಕ್ಕಸಕ್ಕೆ ನಷ್ಟವಾದ ದುಡ್ಡು ಎಷ್ಟು?

ಇನ್ನೂ 13 ರಂದು ಕಳುಹಿಸಿದ ಪತ್ರದಲ್ಲಿ ನಮ್ಮ ಬಳಿ 15 ಲಕ್ಷ ಮೆಟ್ರಿಕ್ ಟನ್ ಅಕ್ಕಿಯಿದೆ. ಅದನ್ನು ಲಿಕ್ವಿಡೇಟ್ ಮಾಡಲು ಖಾಸಗಿಯವರಿಗೆ ಬಿಡುಗಡೆ ಮಾಡಿ.13 ರಂದು ಮತ್ತೊಂದು ಪತ್ರವನ್ನು ಕಳಿಸಿ ಅದೇ ದರದಲ್ಲಿ ಅಕ್ಕಿ ಖರೀದಿ ಮಾಡಲು ರಾಜ್ಯಗಳಿಗೆ ಬಿಡುಗಡೆ ಮಾಡಬೇಡಿ ಅಂತಾ ತಿಳಿಸಿದ್ದಾರೆ.

ಕಾಂಗ್ರೆಸ್ ಪ್ರತಿಭಟನೆಯಲ್ಲಿ ಡಿ.ಕೆ ಶಿವಕುಮಾರ್​ ಭಾಗಿ

ಕೇಂದ್ರ ಸರ್ಕಾರದ ವಿರುದ್ಧ ಇಂದು ಡಿ.ಕೆ ಶಿವಕುಮಾರ್​ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

 

RELATED ARTICLES

Related Articles

TRENDING ARTICLES