Wednesday, January 22, 2025

Monsoon Active in Benglauru: ಇಂದು ಬೆಂಗಳೂರಿನಲ್ಲಿ ತುಂತುರು ಮಳೆ ; ರಾತ್ರಿಯಿಂದಲೇ ಜಡಿ ಮಳೆ ಆರಂಭ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಾನ್ಸೂನ್ ಮಳೆ ನಿನ್ನೆ ರಾತ್ರಿಯಿಂದಲ್ಲೇ ಆರಂಭವಾಗಿದೆ.

ಹೌದು, ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಒಳನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು (ಜೂನ್ 20, ಮಂಗಳವಾರ) ಭಾರಿ ಮಳೆಯಾಗುವ (Karnataka Rain) ಮುನ್ಸೂಚನೆ ಇದ್ದು, ರಾತ್ರಿಯಿಂದಲೇ ಕೆಲವೆಡೆ ಜಡಿ ಮಳೆ ಶುರುವಾಗಿದೆ.

ಬೆಂಗಳೂರಿನ ಕೆಲವು ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಇದ್ದು ಸಂಜೆ ಅಥವಾ ರಾತ್ರಿಯ ವೇಳೆ ಭಾರಿ ಮಳೆಯಾಗುವ (Bengaluru Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದ ಸುತ್ತಮುತ್ತಲಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ತುಮಕೂರು, ಹಾಸನ, ಚಾಮರಾಜನಗರ ಹಾಗೂ ಮೈಸೂರಿನಲ್ಲಿ ವರುಣ ಅಬ್ಬರಿಸುವ ಸಂಭವ ಇದೆ. ಕೋಲಾರ ಜಿಲ್ಲೆಯಲ್ಲಿ ರಾತ್ರಿಯಿಂದಲೇ ಜಡಿ ಮಳೆಯಾಗುತ್ತಿದೆ.

ಬೆಂಗಳೂರಿನಲ್ಲಿ ತುಂತುರು ಮಳೆ

ಬೆಳಗ್ಗೆಯಿಂದಲ್ಲೇ ಬೆಂಗಳೂರಿನಲ್ಲಿ ತುಂತುರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇದೆ. ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ.

RELATED ARTICLES

Related Articles

TRENDING ARTICLES