Wednesday, January 22, 2025

ಕೆಎಂಎಫ್​ ಅಧ್ಯಕ್ಷರಾಗಿ ಭೀಮಾ ನಾಯ್ಕ್​ ಅವಿರೋಧ ಆಯ್ಕೆ..!

ಬೆಂಗಳೂರು: ಕೆಎಂಎಫ್ (ಕರ್ನಾಟಕ ಹಾಲು ಒಕ್ಕೂಟ) ಅಧ್ಯಕ್ಷ ಸ್ಥಾನಕ್ಕೆ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಾ ನಾಯ್ಕ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೆಎಂಎಫ್‌ ಅಧ್ಯಕ್ಷ ಚುನಾವಣೆಗೆ ಶಾಸಕ ಭೀಮಾನಾಯ್ಕ್‌ ಒಬ್ಬರೇ ನಾಮಪತ್ರವನ್ನು ಸಲ್ಲಿಕೆ ಮಾಡಿದ್ದರು. ಇವರ ವಿರುದ್ಧ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ನಾಮಪತ್ರ ಸಲ್ಲಿಕೆ ಮಾಡಿದ ಶಾಸಕ ಭೀಮಾ ನಾಯ್ಕ್‌ ಅವರನ್ನೇ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

ಇದನ್ನೂ ಓದಿ: 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ; ಇಳಿವಯಸ್ಸಿನಲ್ಲೂ ಯೋಗ ಮಾಜಿ ಪ್ರಧಾನಿ ಹೆಚ್ಡಿಡಿ

ಸದ್ಯ ರಾಜ್ಯದಲ್ಲಿ ಕೆಎಂಎಫ್‌ ಅಧ್ಯಕ್ಷ ಸ್ಥಾನದ ಗದ್ದುಗೆ ಏರಲಿರುವ ಭೀಮಾ ನಾಯ್ಕ್ ಅವರ ಹೆಸರನ್ನು ಅಧಿಕೃತ ಘೋಷಣೆಯೊಂದೆ ಬಾಕಿ ಇದೆ.

RELATED ARTICLES

Related Articles

TRENDING ARTICLES