Saturday, January 18, 2025

ಅಪ್ಪನ ಕೈಯಿಂದಲೇ ಅಧಿಕಾರ ಸ್ವೀಕರಿಸಿದ ಮಗಳು

ಮಂಡ್ಯ: ಎಲ್ಲಾ ಹೆಣ್ಣುಗಳಿಗೂ ಸ್ಪೂರ್ತಿ ಅಪ್ಪನೇ ಆಗಿರುತ್ತಾನೆ. ಅಪ್ಪನಂತೆ ಆಗಬೇಕು ಅವರಿಗೆ ಕೀರ್ತಿ ತರಬೇಕು ಎಂದು ಪ್ರತಿಯೊಬ್ಬ ಹೆಣ್ಣುಮಕ್ಕಳ ಮಹದಾಸೆ ಆಗಿರುತ್ತಾದೆ. ಅದೇ ರೀತಿ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆ(Mandya Central Police Station) ಅಪರೂಪ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ.

ಹೌದು, ಒಂದು ಕಡೆ ತಂದೆಯ ವರ್ಗಾವಣೆಯಾಗುತ್ತಿದ್ರೆ ಮತ್ತೊಂದು ಕಡೆ ಅದೇ ಸ್ಥಳಕ್ಕೆ ಮಗಳ ನಿಯೋಜನೆಯಾಗಿದ್ದಾಳೆ. ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಎಸ್‌ಐ ಆಗಿದ್ದ ಬಿ‌.ಎಸ್.ವೆಂಕಟೇಶ್ ಅವರು ಎಸ್ಪಿ ಕಚೇರಿಗೆ ವರ್ಗಾವಣೆಯಾಗಿದ್ದು ತಮ್ಮ ಮಗಳೂ ಆದ ನೂತನ ಎಸ್‌ಐ ಬಿ.ವಿ.ವರ್ಷಾ ಅವರಿಗೆ ಜೂನ್ 20ರ ಮಂಗಳವಾರ ಅಧಿಕಾರ ಹಸ್ತಾಂತರ ಮಾಡಿದ್ದಾರೆ.

ಇದನ್ನೂ ಓದಿ: ಬ್ರ್ಯಾಂಡ್ ಬೆಂಗಳೂರು ವೆಬ್ ಪೋರ್ಟಲ್ ಬಿಡುಗಡೆ ಮಾಡಿದ ಡಿಕೆಶಿ

ಪಿಎಸ್‌ಐ ಪರೀಕ್ಷೆಯಲ್ಲಿ ತೇರ್ಗಡೆಗೊಂಡ 2022ರ ಬ್ಯಾಚ್‌ನಲ್ಲಿ ಪಿಎಸ್‌ಐ ಆಗಿರುವ ವರ್ಷಾ ಅವರು ಗುಲ್ಬರ್ಗಾದಲ್ಲಿ ತರಬೇತಿ ಮುಗಿಸಿ, ಮಂಡ್ಯದಲ್ಲೇ 1 ವರ್ಷ ಪ್ರೊಬೆಷನರಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಈಗ ಅವರ ಮೊದಲ ಪೋಸ್ಟಿಂಗ್ ಕೂಡ ಮಂಡ್ಯದಲ್ಲೇ ಆಗಿದೆ.

ಅಪ್ಪನ ಕೈಯಿಂದಲೇ ಅಧಿಕಾರಿ ಸ್ವೀಕರಿಸಿದ ಮಗಳು 

ಅದೂ ಕೂಡ ಅದೃಷ್ಟವೆಂಬಂತೆ ತನ್ನ ತಂದೆ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಗೆ ಪಿಎಸ್‌ಐ ಪೋಸ್ಟಿಂಗ್ ಪಡೆದಿದ್ದಾರೆ. ಠಾಣೆಯಲ್ಲಿ ಮಂಗಳವಾರ ತಂದೆಯಿಂದಲೇ ಪಿಎಸ್‌ಐ ಜಾರ್ಚ್ ಪಡೆದುಕೊಂಡು ಪೊಲೀಸ್ ವೃತ್ತಿಜೀವನ ಆರಂಭಿಸಿದ್ದಾರೆ. ಇವರು ಅರ್ಥಶಾಸ್ತದಲ್ಲಿ ಎಂಎ ಪದವಿಯನ್ನೂ ಪಡೆದಿದ್ದಾರೆ.

RELATED ARTICLES

Related Articles

TRENDING ARTICLES