ಬೆಂಗಳೂರು: ರಾಜ್ಯಕ್ಕೆ ಮುಂಗಾರು ಮಳೆ ಈಗಲೇ ಕಾಲಿಟ್ಟಿದ್ದು,ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ.ಇನ್ನು ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ. ಎಂದು ಹವಮಾನ ಇಲಾಖೆ ತಿಳಿಸಿದೆ.
ಹೌದು, ಬೆಂಗಳೂರು ಸೇರಿದಂತೆ ದಕ್ಷಿಣ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ ಐದನೇ ದಿನಕ್ಕೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜೂನ್ 24ರಂದು ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: ಶಾಲೆಗೆ ನುಗ್ಗಿದ ಮಳೆ ನೀರು, ಕೆಸರು ಕ್ಲೀನ್ ಮಾಡಲು ಪರದಾಟ
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ 39 ಡಿಗ್ರಿ, ಕನಿಷ್ಠ 28 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕೊಡಗು ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್, ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.