Thursday, December 19, 2024

ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಿ : ಎಂದ ಸಚಿವೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಅನ್ನ ಭಾಗ್ಯದ ಯೋಜನೆಯಡಿಯಲ್ಲಿ ರಾಜದ ಜನರಿಗೆ ಫ್ರೀ ಅಕ್ಕಿ ಕೊಡಲು ಸಾಧ್ಯವಿಲ್ಲದಿದ್ದರೆ ಅಧಿಜಕಾರ ಬಿಟ್ಟು ತೊಲಗಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ವಿರುದ್ದ ಕಿಡಿಕಾರಿದ್ದಾರೆ.

ಹೌದು, ಚಿಕ್ಕಮಗಳೂರಿನಲ್ಲಿ (Chikkamagaluruಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನೀವು ಯೋಜನೆಗಳನ್ನು ಘೋಷಿಸುವಾಗ ತಲೆಯಲ್ಲಿ ಮೆದುಳು ಇರಲಿಲ್ವಾ, ಆವಾಗ ಸಗಣಿ ತುಂಬಿತ್ತಾ?, ಕೇಂದ್ರದ ಅಕ್ಕಿ ಸೇರಿ ರಾಜ್ಯದ ಜನರಿಗೆ ಒಟ್ಟು 15 ಕೆಜಿ ಅಕ್ಕಿ ಕೊಡಿ. ಚುನಾವಣೆಯಲ್ಲಿ ಯೋಜನೆಯನ್ನೂ ಘೋಷಿಸುವಾಗ ಸುಳ್ಳು ಭರವಸೆ ಕೊಟ್ಟು ಆಸೆ ತೋರಿಸಿದ್ದಾರೆ. ಸಿದ್ದರಾಮಯ್ಯನವರೇ ಬೇಜವಾಬ್ದಾರಿ ಹೇಳಿಕೆ ವಾಪಸ್​ ತೆಗೆದುಕೊಳ್ಳಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆ ಗೆಲ್ಲಲು ಸುಳ್ಳು ಗ್ಯಾರಂಟಿ ಘೋಷಣೆ ಮಾಡಿದ್ರಿ, ಮಹಿಳೆಯರು ಬಸ್​​ ಪಾಸ್ ಪಡೆಯಲು ಸರ್ಟಿಫಿಕೇಟ್ ಕೇಳುತ್ತಿದ್ದಾರೆ. ನಾನು ಮಹಿಳೆ ಅನ್ನೋದಕ್ಕೆ ನನಗೆ ಸರ್ಟಿಫಿಕೇಟ್ ಬೇಕಿಲ್ಲ. ಅಕ್ಕಿ, ದುಡ್ಡು, ವಿದ್ಯುತ್ ಎಲ್ಲದಕ್ಕೂ ಮೋದಿ ಕಡೆ ತೋರಿಸುತ್ತಿದ್ದೀರಿ. ಹಾಗಾದರೆ ನೀವು ಗ್ಯಾರಂಟಿ ಕಾರ್ಡ್ ಯಾಕೆ ವಿತರಣೆ ಮಾಡಿದ್ದೀರಿ. ಬೇರೆ ರಾಜ್ಯ, ನಮ್ಮ ರಾಜ್ಯದ ರೈತರಿಂದ ಅಕ್ಕಿ ಖರೀದಿಸಿ ರಾಜ್ಯದ ಜನರಿಗೆ ಕೊಡಿ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: International Yoga Day 2023 : ವಿಶ್ವ ಯೋಗ ದಿನಾಚರಣೆಗೆ ಅಮೆರಿಕದಿಂದ ಪ್ರಧಾನಿ ಮೋದಿ ವಿಡಿಯೋ…

ನಿಮ್ಮ ಗ್ಯಾರೆಂಟಿ ಯೋಜನೆಗಳನ್ನ ಘೋಷಣೆ ಮಾಡಿದಾಗಲೇ ನಾವು ಅಂದೆ ಕೇಳಿದ್ವಿ, ಇವಕ್ಕೆಲ್ಲಾ ಹಣ ಎಲ್ಲಿಂದ ತರುತ್ತೀರಾ ಎಂದು, ಇವತ್ತು ಅಕ್ಕಿ, ದುಡ್ಡು, ವಿದ್ಯುತ್ ಎಲ್ಲದಕ್ಕೂ ಮೋದಿ ಕಡೆ ಬೆರಳು ಮಾಡಿ ತೋರಿಸುತ್ತಿದ್ದೀರಿ ಎಂದು ಚಿಕ್ಕಮಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

 

 

RELATED ARTICLES

Related Articles

TRENDING ARTICLES