ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಒಕ್ಕಲಿಗ ಮತಬೇಟೆಗೆ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಈ ಸಂಬಂಧ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ತವರು ಜಿಲ್ಲೆ ಹಾಸನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಮಾಡಲು ಸರ್ಕಾರ ನಿರ್ಧರಿಸಲಾಗಿದೆ.
ಸಚಿವ ಶಿವರಾಜ್ ತಂಗಡಗಿ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಕಾರ್ಯಕ್ರಮದ ಪ್ರಸ್ತಾವನೆ ಪತ್ರವನ್ನು ನೀಡಲಾಯಿತು.
ಹಾಸನ ಜಿಲ್ಲಾ ಉಸ್ತುವಾರಿ ಕೆ.ಎನ್.ರಾಜಣ್ಣ ಹಾಗೂ ಅರಸೀಕೆರೆ ಶಾಸಕ ಕೆ.ಎಂ ಶಿವಲಿಂಗೇಗೌಡರಿಗೆ ಜವಾಬ್ದಾರಿ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಯಲ್ಲಿ ಕೆಂಪೇಗೌಡರ ಜಯಂತಿ ಆಚರಣೆ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಆದರೆ, ಈ ಬಾರಿಯ ದಿನಾಚರಣೆ ಹಾಸನದಲ್ಲಿ ನಡೆಸಲು ಭರ್ಜರಿ ಸಿದ್ಧತೆ ಮಾಡಿಕೊಳ್ಳಾಗುತ್ತಿದೆ.