Monday, December 23, 2024

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ : ಕ್ಷೇತ್ರ ಶಿಕ್ಷಣಾಧಿಕಾರಿಗೆ 5 ವರ್ಷ ಜೈಲು, 25 ಸಾವಿರ ದಂಡ

ಗದಗ : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕ್ಷೇತ್ರ ಶಿಕ್ಷಣಾಧಿಕಾರಿಗೆ 5 ವರ್ಷ ಜೈಲು ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.

ಗದಗ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಶಂಕ್ರಪ್ಪ ಶಿಕ್ಷೆಗೆ ಒಳಗಾದ ಕ್ಷೇತ್ರ ಶಿಕ್ಷಣಾಧಿಕಾರಿ.

ಈತ ಸದ್ಯ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದನು. ಶಂಕ್ರಪ್ಪ 2020ರಲ್ಲಿ ಗದಗ ಜಿಲ್ಲೆ ಮುಂಡರಗಿ ಬಿಇಓ ಆಗಿ ಕಾರ್ಯನಿರ್ವಹಿಸಿದ್ದನು. ಈ ಸಂದರ್ಭದಲ್ಲಿ ಮನೆ ಭೇಟಿ ಕಾರ್ಯಕ್ರಮ ನೆಪದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದನು.

ಇದನ್ನೂ ಓದಿ : ಸೈನಿಕನ ಹತ್ಯೆ : 7 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಧಾರವಾಡ ಹೈಕೋರ್ಟ್

ಈ ಪ್ರಕರಣ ಸಂಬಂಧ ಶಂಕ್ರಪ್ಪ ವಿರುದ್ಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ 29/2020, ಕಲಂ 354(ಎ), 8, 10, 12, ಐಪಿಸಿ ಕಲಂ ಫೋಕ್ಸೋ ಕಾಯ್ದೆ 2012ರ ಅಡಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪ ಸಾಬೀತಾದ ಹಿನ್ನೆಲೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲ ಶಿಕ್ಷೆ ವಿಧಿಸಿದೆ.

RELATED ARTICLES

Related Articles

TRENDING ARTICLES