Wednesday, January 22, 2025

ಶೀಘ್ರವೇ ಸುಳ್ಳು ಸುದ್ದಿ ನಿಯಂತ್ರಣಕ್ಕೆ ಸಭೆ : ಡಾ.ಜಿ. ಪರಮೇಶ್ವರ

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಸಂಬಂಧ ನಿಯಂತ್ರಣ ಹೇರಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೇ ಸೋಶಿಯಲ್​ ಮೀಡಿಯಾ ಸಂಬಂಧ ಸಭೆ ನಡೆಸಲಾಗುವುದು ಎಂದರು.

ರಾಜ್ಯ ಸರ್ಕಾರವು ಶೀಘ್ರದಲ್ಲೇ ಸಾಮಾಜಿಕ ಮಾಧ್ಯಮ ಸೈಟ್‌ಗಳು ಮತ್ತು ಗೂಗಲ್, ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಂನಂತಹ ವೇದಿಕೆಗಳೊಂದಿಗೆ ಕೋಮು ಗಲಭೆಯನ್ನು ಪ್ರಚೋದಿಸುವ ಸೂಕ್ಷ್ಮ ವಿಚಾರಗಳ ಪೋಸ್ಟ್‌ಗಳನ್ನು ನಿಯಂತ್ರಿಸಲು ಚರ್ಚೆ ನಡೆಸಲಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಮಗಳ ಸಾಧನೆ ನೆನೆದು ಕಣ್ಣೀರಿಟ್ಟ ಪಿಎಸ್ಐ ವೆಂಕಟೇಶ್

ಸೈಬರ್ ಭದ್ರತಾ ವಿಭಾಗ ಸ್ಥಾಪನೆ

ನ್ಯಾಯವ್ಯಾಪ್ತಿಯ ಮಟ್ಟದಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಅಂತಹ ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡಲು ಪ್ರತಿ ಪೊಲೀಸ್ ಠಾಣೆಗಳಲ್ಲಿ ಸೈಬರ್ ಭದ್ರತಾ ವಿಭಾಗವನ್ನು ಸ್ಥಾಪಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.

ಫೇಕ್​ ನ್ಯೂಸ್​ಗಳನ್ನು ನಾವು ಬಹಳ ಎಚ್ಚರಿಕೆಯಿಂದ ಗಮನಿಸುತ್ತಿದ್ದೇವೆ. ಕೆಲವರು ಅಪರಿಚಿತ ಸ್ಥಳಗಳಿಂದ ಸೂಕ್ಷ್ಮ ವಿಷಯಗಳ ಕುರಿತು ಪೋಸ್ಟ್‌ಗಳನ್ನು ಮಾಡುತ್ತಿದ್ದಾರೆ. ಜನರನ್ನು ಪ್ರಚೋದಿಸುವ ಸಮಸ್ಯೆಗಳನ್ನು ಸಹ ಪೋಸ್ಟ್ ಮಾಡುತ್ತಿದ್ದಾರೆ. ಸೈಬರ್ ಸೆಲ್‌ಗಳು ಮತ್ತು ಸೈಬರ್ ಪೊಲೀಸ್ ಠಾಣೆಗಳಿಂದ ಅಂತವರನ್ನು ನಿರ್ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದರು.

RELATED ARTICLES

Related Articles

TRENDING ARTICLES