Monday, December 23, 2024

ಬಿಜೆಪಿ ಅವಧಿಯ ಎಲ್ಲ ಕಾಮಗಾರಿಗಳ ತನಿಖೆಗೆ ಸರ್ಕಾರ ಆದೇಶ

ಬೆಂಗಳೂರು: ಬಿಜೆಪಿ ಕಾಲಾವಧಿಯಲ್ಲಿ ನಡೆದ ಎಲ್ಲಾ ಕಾಮಗಾರಿಗಳ ತನಿಖೆ ನಡೆಸಲು ರಾಜ್ಯ ಸರ್ಕಾರ ಸೂಚಿಸಿದೆ.

ಬಿಬಿಎಂಪಿಯಲ್ಲಿ ಸಾವಿರಾರು ಕೋಟಿ ಕಾಮಗಾರಿಯನ್ನು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ಮಾಡಿದ್ದು, KRIDLಗೆ ವಹಿಸಿರುವ ಕಾಮಗಾರಿಗಳ ಬಿಲ್​​​​​ಗಳನ್ನ ತಡೆಹಿಡಿಯಲು ರಾಜ್ಯ ಸರ್ಕಾರ ಸೂಚನೆ ನೀಡಲಾಗಿದೆ. ಈಗಾಗಲೇ ಮಾಡಿರುವ ಕಾಮಗಾರಿಗಳು ಹಾಗೂ ಚಾಲ್ತಿಯಲ್ಲಿರುವ ಕಾಮಗಾರಿಗಳ‌ ಬಗ್ಗೆ ತನಿಖೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ನೀಡಿದ್ದಾರೆ.

ಇದನ್ನೂ ಓದಿ: ಪರಿಷತ್ಗೆ ನಾಮ ನಿರ್ದೇಶನ : ಅಭ್ಯರ್ಥಿಗಳ ಹೆಸರು ಫೈನಲ್ ಮಾಡಿದ ಕಾಂಗ್ರೆಸ್, ಉಮಾಶ್ರೀಗೆ ನಿರಾಸೆ

ಕೆ.ಆರ್.ಐ.ಡಿ.ಎಲ್ ಕಾಮಗಾರಿಗಳ ತನಿಖೆಗೆ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಕಾಮಗಾರಿಗಳ ಕುರಿತು ಕೂಲಂಕಷವಾಗಿ ಅಮ್ಲಾನ್ ಆದಿತ್ಯ ಬಿಸ್ವಾಸ್ ತನಿಖೆ ನಡೆಸಲಿದ್ದಾರೆ.

ಇನ್ನು ತನಿಖೆ ನಡೆದು ವರದಿ ಬರುವವರೆಗೆ ಕಾಮಗಾರಿಯೂ ಇಲ್ಲ, ಬಿಲ್ ಪಾವತಿಯೂ ಇರೋದಿಲ್ಲ ಎಂದು ಎಲ್ಲಾ ಎಂಜಿನಿಯರ್​​​​​​ಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ.

 

RELATED ARTICLES

Related Articles

TRENDING ARTICLES