Tuesday, November 5, 2024

ಕೆಂಪೇಗೌಡ ಜಯಂತಿ ಒಂದು ಸಮುದಾಯಕ್ಕೆ ಸೀಮಿತವಲ್ಲ ; ಡಿ.ಕೆ ಶಿವಕುಮಾರ್​

ಬೆಂಗಳೂರು:  ಜೂನ್​ 27ರಂದು ನಡೆಯುವ ಕೆಂಪೇಗೌಡ ಜಯಂತಿಯನ್ನು ಎಲ್ಲಾ ತಾಲೂಕುಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕೆಂಪೇಗೌಡ ಜಯಂತಿ ಆಚರಿಸಬೇಕು ಈ ಜಯಂತಿ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ಹೌದು, ವಿಧಾನಸೌಧದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಸಭೆ ಮಾಡಲಾಯಿತು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಂಪೇಗೌಡ ಜಯಂತಿ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಆಚರಣೆಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.

ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳು ಇಲ್ಲಿವೆ ನೋಡಿ 

  • ಕೆಂಪೇಗೌಡ ಜಯಂತಿ ಕಾರ್ಯಕ್ರಮ ಯಾವುದೇ ಜಾತಿ ಧರ್ಮ ಮತ್ತು ಭಾಷೆಗೆ ಸೀಮಿತ ಅಲ್ಲ.
  • ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಡೆಯಿಂದ ಜೂನ್ 27 ರಂದು ರಾಜ್ಯದ ಎಲ್ಲ ತಾಲೂಕಿನಲ್ಲೂ ರಾಜ್ಯ ಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಕಡ್ಡಾಯ ಆಚರಣೆಗೆ ಸೂಚನೆ ನೀಡಬೇಕು
  • ಮಾಗಡಿ ಯಲಹಂಕ, ಕೆಂಪಾಂಬುದಿ ಕೆರೆ ಲಾಲ್ ಬಾಗ್ ಸೇರಿದಂತೆ ನಗರದ 5 ಕಡೆಗಳಿಂದ ಜ್ಯೋತಿ ಹಿಡಿದು ವಿಧಾನಸೌಧಕ್ಕೆ ಜಾತ್ರಾ ಮೆರವಣಿಗೆ.
  • ಜುಲೈ 9ರಂದು ಬಿವಿಎಂಪಿ ವತಿಯಿಂದ ಪ್ರಶಸ್ತಿ ಪ್ರಧಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ
  • ಬೆಳಗ್ಗೆ 9 ಗಂಟೆಗೆ ಆರಂಭವಾಗಲಿರುವ ಮೆರವಣಿಗೆಯನ್ನು ಸಚಿವರಿಂದ ಉದ್ಘಾಟನೆ.
  • 12 ಗಂಟೆಗೆ ವಿಧಾನಸೌಧದ ಎದುರಿರುವ ಕೆಂಪೇಗೌಡ ಪ್ರತಿಮೆಯ ಬಳಿ ಮೆರವಣಿಗೆ ಆಗಮನ.
  • ಮಧ್ಯಾಹ್ನ 12 ಗಂಟೆಯ ನಂತರ ಬ್ಯಾಂಕ್ವೆಟ್ ಹಾಲ್​ನಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ
  • ಬಿಎಲ್ ಶಂಕರ್ ನೇತೃತ್ವದಲ್ಲಿ ಸಾಧಕರ ಆಯ್ಕೆ ಮಾಡಿದ್ದು, ಮೂರು ಜನ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವ.
  • ಬೆಂಗಳೂರು ನಗರದಲ್ಲಿ 28 ರಿಂದ 5ರ ವರೆಗೆ ಶಾಸಕರ ಅನುಕೂಲಕ್ಕೆ ತಕ್ಕಂತೆ ಎಲ್ಲ ಬೆಂಗಳೂರಿನ ಎಲ್ಲ ಕ್ಷೇತ್ರದಲ್ಲೂ ಕಾರ್ಯಕ್ರಮ ಕಡ್ಡಾಯ ಆಚರಿಸಬೇಕು.
  • ಬಿಬಿಎಂಪಿ ವಾರ್ಡ್ ಮಟ್ಟದ ಪ್ರಶಸ್ತಿಗೆ 198 ಜನ ಸಾಧಕರನ್ನು ಆಯ್ಕೆ
  • ಎಲ್ಲ ಜಾತಿ ಧರ್ಮಗಳ ಸಾಧಕರಿಗೂ ಪ್ರಶಸ್ತಿ ನೀಡುವ ಉದ್ದೇಶ
  • ಕ್ರೀಡೆ ಸಾಹಿತಿ ಸಮಾಜಸೇವೆ ಮಾನದಂಡದ ಅಡಿಯಲ್ಲಿ ಸಾಧಕರ ಆಯ್ಕೆ
  • ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಾಸನದಲ್ಲೂ ಪ್ರತ್ಯೇಕ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆ ಕಾರ್ಯಕ್ರಮ ಹಾಗೆ ಮುಂದುವರೆಯಲಿದೆ.

    198 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ

    ಕೆಂಪೇಗೌಡ ಪ್ರಾಧಿಕಾರದಿಂದ ನಡೆಯುವ ಕಾರ್ಯಕ್ರಮಕ್ಕೆ ಕಂದಾಯ ಇಲಾಖೆ ಸಹಭಾಗಿತ್ವ ಇರಲಿದೆ. ಬಿಬಿಎಂಪಿ ವಾರ್ಡ್ ಮಟ್ಟದಲ್ಲೂ ಹಿಂದೆ ಜಯಂತಿ ಆಚರಣೆ‌ ನಡೆಯುತ್ತಿತ್ತು. ಎಲ್ಲಾ ಕ್ಷೇತ್ರದ 198 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ನೀಡಲು ನಿರ್ಧಾರ ಮಾಡಿದ್ದು, ಬಿ.ಎಲ್​.ಶಂಕರ್​ ನೇತೃತ್ವದಲ್ಲಿ ಅರ್ಹ ವ್ಯಕ್ತಿಗಳ ಆಯ್ಕೆ ಮಾಡಲಾಗಿದೆ. ಹಾಸನದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ನಡೆಸಲು ಅನುಮತಿ ನೀಡಲಾಗಿದೆ ಎಂದು ಹೇಳಿದರು.

    https://twitter.com/DKShivakumar/status/1671848907553521664

RELATED ARTICLES

Related Articles

TRENDING ARTICLES