ಮೈಸೂರು: ಚಾಮುಂಡಿ ಬೆಟ್ಟದಲ್ಲಿ (Chamundi Hills) ಮೊದಲ ಆಷಾಢ ಶುಕ್ರವಾರದ (Ashada Friday) ಸಂಭ್ರಮ ಶುರುವಾಗಲಿದೆ.
ಹೌದು, ಆಷಾಢ ಶುಕ್ರವಾರ ಬಂದ್ರೆ ಸಾಕು ಅರಮನೆ ನಗರಿ ಮೈಸೂರು (Mysuru) ಹಾಗೂ ಚಾಮುಂಡಿ ಭಕ್ತರಿಗೆ ಸಂಭ್ರಮವೋ ಸಂಭ್ರಮ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಇಂದು ನಾಡದೇವತೆ, ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಮಾಡಲಾಗುತ್ತದೆ.
ಇದನ್ನೂ ಓದಿ: ಕೆಂಪೇಗೌಡ ಜಯಂತಿ ಒಂದು ಸಮುದಾಯಕ್ಕೆ ಸೀಮಿತವಲ್ಲ ; ಡಿ.ಕೆ ಶಿವಕುಮಾರ್
ಮುಂಜಾನೆ 3 ಗಂಟೆ 30 ನಿಮಿಷಕ್ಕೆ ಅಭಿಷೇಕದೊಂದಿಗೆ ಆರಂಭವಾಗುವ ವಿವಿಧ ರೀತಿಯ ಪೂಜಾ ಕೈಂಕರ್ಯ ಎರಡು ಗಂಟೆಗಳ ಕಾಲ ನಿರಂತರವಾಗಿ ನಡೆಯುತ್ತದೆ.
ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ದೇವಿಗೆ ಲಕ್ಷ್ಮೀ ಅಲಂಕಾರ ಮಾಡಿ ಬಳಿಕ 5 ಗಂಟೆ 30 ನಿಮಿಷಕ್ಕೆ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಚಾಮುಂಡೇಶ್ವರಿ ದರ್ಶನ ಪಡೆಯಲು ಹರಿದು ಬಂದ ಭಕ್ತರು
ತಾಯಿಯ ದರ್ಶನ ಪಡೆಯಲು ಮುಂಜಾನೆಯಿಮದಲ್ಲೇ ಭಕ್ತ ಸಾಗರ ಹರಿದು ಬರುತ್ತಿದ್ದಾರೆ. ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.
ಬೆಟ್ಟಕ್ಕೆ ಹೊರಡುವ ಸಾರ್ವಜನಿಕರ ವಾಹನಗಳಿಗೆ ನಿಷೇಧ
ಬೆಟ್ಟಕ್ಕೆ ಪ್ರತಿ ಆಷಾಢ ಶುಕ್ರವಾರದಂದು ಖಾಸಗಿ ವಾಹನಗಳಿಗೆ ನಿರ್ಬಂಧ ವಿಧಿಸಲಾಗುತ್ತದೆ. ಅಂತೆಯೇ ಈ ಬಾರಿಯೂ ಖಾಸಗಿ ಬಸ್‌ಗಳಿಗೆ ನಿರ್ಬಂಧ ವಿಧಿಸಿದ್ದು, ಸರ್ಕಾರಿ ಬಸ್ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಆಷಾಢ ಪೂಜಾ ಕೈಂಕರ್ಯಗಳಿಗೆ ಸಿದ್ಧತೆ ಜೋರಾಗಿದೆ.