Monday, December 23, 2024

ಬಸವರಾಜ ಬೊಮ್ಮಾಯಿ ಭೇಟಿಯಾದ ಡಿ.ಕೆ ಶಿವಕುಮಾರ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಶುಕ್ರವಾರ ಭೇಟಿ ಮಾಡಿದರು.

ಬೆಂಗಳೂರಿನ ರೇಸ್​ಕೋರ್ಸ್​ ರಸ್ತೆಯ ನಿವಾಸಕ್ಕೆ ತೆರಳಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಸೌಹಾರ್ದಯುತವಾಗಿ ಮಾತನಾಡಿದ್ದಾರೆ.

ಮನೆಗೆ ಬಂದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಬೊಮ್ಮಾಯಿ ಹೂ ಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಈ ವೇಳೆ ಡಿಕೆಶಿ ಬೊಮ್ಮಾಯಿ ಅವರಿಗೂ ಶಾಲು ಹೊದಿಸಿ, ಹೂ ಗುಚ್ಛ ನೀಡಿ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ ಸಿದ್ದರಾಮಯ್ಯ

ಬಳಿಕ, ಇಬ್ಬರು ನಾಯಕರು ಹಲವು ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಮುಖ್ಯವಾಗಿ ಬ್ರಾಂಡ್ ಬೆಂಗಳೂರು ಸಂಬಂಧ ಡಿ.ಕೆ ಶಿವಕುಮಾರ್ ಅವರು ಬೊಮ್ಮಾಯಿಯವರ ಬಳಿ ಸಲಹೆ ಪಡೆದಿದ್ದಾರೆ ಎನ್ನಲಾಗಿದೆ.

HDKಯನ್ನೂ ಭೇಟಿ ಮಾಡ್ತೀನಿ

ಹಿಂದೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಎಸ್.ಎಂ ಕೃಷ್ಣ ಸೇರಿ ಹಿರಿಯ ನಾಯಕರನ್ನು ಭೇಟಿ ಮಾಡಿದ್ದೇನೆ. ನಾನು ಕುಮಾರಣ್ಣನನ್ನೂ ಕೂಡ ಭೇಟಿ ಮಾಡಿ ಸಲಹೆ ಪಡೀತೀನಿ. ರಾಜಕಾರಣ ಬಿಟ್ಟು ಅಭಿವೃದ್ಧಿ ಬಗ್ಗೆ ಮಾತನಾಡುತ್ತೇನೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES