Sunday, December 22, 2024

ಕರಾವಳಿಯಲ್ಲಿ ಮತ್ತೆ ಚುರುಕಾದ ಮುಂಗಾರು ಮಳೆ

ಬೆಂಗಳೂರು: ಕರಾವಳಿಯಲ್ಲಿ ಮುಂಗಾರು ಚುರುಕಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸೇರಿ ಕರಾವಳಿ ತಾಲೂಕುಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ.

ಹೌದು, ಮುಂಜಾನೆಯಿಂದ ಮಳೆ ಬರುತ್ತಿದ್ದು, ಮುಂಗಾರು ಆರಂಭವಾಗಿ 20 ದಿನಗಳ ಬಳಿಕ ವರುಣ ಅಬ್ಬರಿಸುತ್ತಿದ್ದಾನೆ. ಮಳೆಗಾಗಿ ಕಾದು ಕುಳಿತಿದ್ದ ರೈತಾಪಿ ವರ್ಗದಲ್ಲಿ ವರುಣ ಭರವಸೆ ಮೂಡಿಸಿದ್ದಾನೆ. ಕರಾವಳಿಯುದ್ದಕ್ಕೂ ಮಳೆ ಜೋರಾಗಿದ್ದು, ಕೆರೆ-ಕಟ್ಟೆ, ಬಾವಿಗಳು ತುಂಬಿವೆ.

ಇದನ್ನೂ ಓದಿ: ಮುಂಗಾರು ಚುರುಕು : ಜೂನ್ 25ರಿಂದ 15 ಜಿಲ್ಲೆಗಳಲ್ಲಿ ಮಳೆರಾಯನದ್ದೇ ಆರ್ಭಟ

ಯಾವೆಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..? 

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನುಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

RELATED ARTICLES

Related Articles

TRENDING ARTICLES