Tuesday, May 21, 2024

ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗ ದುರ್ಮರಣ ; 11 ಅಧಿಕಾರಿಗಳ ಮೇಲೆ ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು

ಬೆಂಗಳೂರು: ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮಗ ಸಾವನ್ನಪ್ಪಿದ ಪ್ರಕರಣ (Metro pillar collapse case) ಸಂಬಂಧ ಪೊಲೀಸರು ನ್ಯಾಯಾಲಯಕ್ಕೆ ಸುಮಾರು 1100 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಹೌದು, ಘಟನೆ ನಡೆದು ಐದು ತಿಂಗಳ ನಂತರ ಗೋವಿಂದಪುರ ಪೊಲೀಸ್ ಠಾಣಾಯ ಪೊಲೀಸರು ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಈ ದೋಷಾರೋಪಣೆ ಪಟ್ಟಿಯಲ್ಲಿ 11 ಅಧಿಕಾರಿಗಳ ಮೇಲೆ ದೋಷಾರೋಪ ಮಾಡಲಾಗಿದೆ.

ಇದನ್ನೂ ಓದಿ: ಕರಾವಳಿಯಲ್ಲಿ ಮತ್ತೆ ಚುರುಕಾದ ಮುಂಗಾರು ಮಳೆ

ಬರೋಬ್ಬರಿ ಐದು ತಿಂಗಳು ತನಿಖೆ ನಡೆಸಿದ್ದ ಪೊಲೀಸರು

ಬರೋಬ್ಬರಿ ಐದು ತಿಂಗಳು ತನಿಖೆ ನಡೆಸಿದ್ದ ಗೋವಿಂದಪುರ ಠಾಣಾ ಪೊಲೀಸರು ಕನ್ಸ್ಟ್ರಕ್ಷನ್ ಕಂಪನಿ ಇಂಜಿನಿಯರ್ಸ್ ಹಾಗೂ ಬಿಎಂಆರ್​ಸಿಎಲ್ ಇಂಜಿನಿಯರ್ಸ್ ಸೇರಿ 11 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

ತಜ್ಞರ ವರದಿಗಳು, ಪೊಲೀಸರ ತನಿಖೆ ಹಾಗೂ ಎಫ್ಎಸ್ಎಲ್ ರಿಪೋರ್ಟ್ ಆಧಾರದ ಮೇಲೆ ತನಿಖೆ ನಡೆಸಿದ್ದ ಪೊಲೀಸರು ಐಐಟಿ ರಿಪೋರ್ಟ್ ಮತ್ತು ಎಫ್ಎಸ್ಎಲ್ ರಿಪೋರ್ಟ್ ಚಾರ್ಜ್ ಶೀಟ್​ನಲ್ಲಿ ಅಟ್ಯಾಚ್ ಮಾಡಿದ್ದಾರೆ. ಅಲ್ಲದೆ, ಅಧಿಕಾರಿಗಳ ಲೋಪ, ಹಾಗೂ ಪಿಲ್ಲರ್ ನಿರ್ಮಾಣ ವೇಳೆ ಕೈಗೊಂಡ ಸುರಕ್ಷತಾ ಕ್ರಮಗಳ ವೈಫಲ್ಯದ ಬಗ್ಗೆ ಉಲ್ಲೇಖಿಸಲಾಗಿದೆ.

11 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಸಲ್ಲಿಸಿದ ಪೊಲೀಸರು  

ಪ್ರಾಜೆಕ್ಟ್ ಡಾಕ್ಯುಮೆಂಟ್​ಗಳನ್ನ ಪರಿಶೀಲನೆ ನಡೆಸಿದ ಪೊಲೀಸರು, ಪಿಲ್ಲರ್ ಡಿಸೈನ್ ಹೇಗೆ ಮಾಡಲಾಗಿತ್ತು, ಸುರಕ್ಷತೆ ಏನೆಲ್ಲಾ ಕ್ರಮ ಕೈಗೊಳ್ಳಬೇಕಿತ್ತು, ಲೋಪ ಯಾರದ್ದು ಎಂಬಿತ್ಯಾದಿ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ. ಅಲ್ಲದೆ, ಘಟನೆ ಬಗ್ಗೆ ಐಐಟಿ ರಿಪೋರ್ಟ್ ಮತ್ತು ಬಳಕೆಯಾದ ಮೆಟಿರಿಯಲ್ಸ್ ಬಗ್ಗೆ ಎಫ್ಎಸ್ಎಲ್ ರಿಪೋರ್ಟ್ ಪಡೆದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಬೆಂಗಳೂರು ಮೆಟ್ರೋ ಪಿಲ್ಲರ್ ದುರಂತ ಪ್ರಕರಣದ ಹಿನ್ನೆಲೆ

ಘಟನೆ ನಡೆಯುವ ಮುನ್ನ ತನ್ನ ಇಬ್ಬರು ಮಕ್ಕಳೊಂದಿಗೆ ದಂಪತಿ ದ್ವಿಚಕ್ರ ವಾಹನದಲ್ಲಿ ಬೆಂಗಳೂರಿನ ನಾಗವಾರದಿಂದ ಹೋಗುತ್ತಿದ್ದಾಗ ಕಲ್ಯಾಣ್ ನಗರದಿಂದ ಹೆಚ್‌ಆರ್‌ಬಿಆರ್ ಲೇಔಟ್‌ಗೆ ಹೋಗುವ ರಸ್ತೆಯಲ್ಲಿ ನಿರ್ಮಿಸಲಾಗುತ್ತಿದ್ದ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ನ ಕಬ್ಬಿಣದ ರಾಡ್‌ಗಳು ದ್ವಿಚಕ್ರ ವಾಹನದ ಮೇಲೆ ಕುಸಿದು ಬಿದ್ದಿತ್ತು. ಈ ದುರ್ಘಟನೆಯಲ್ಲಿ ಮಹಿಳೆ ತೇಜಸ್ವಿನಿ (28) ಮತ್ತು ಈಕೆಯ ಎರಡೂವರೆ ವರ್ಷದ ಮಗು ವಿಹಾನ್ ಸಾವನ್ನಪ್ಪಿದ್ದರು. ಮತ್ತೊಂದು ಮಗು ಮತ್ತು ಮೃತೆಯ ಪತಿ ಲೋಹಿತ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು.

ದುರ್ಘಟನೆ ಸಂಬಂಧ ಮೃತ ತೇಜಸ್ವಿನಿ ಪತಿ ಲೋಹಿತ್ ಕುಮಾರ್ ನೀಡಿದ ದೂರಿನ ಅನ್ವಯ ಸೈಟ್ ಇಂಜಿನಿಯರ್ಸ್‌, ಕಂಟ್ರ್ಯಾಕ್ಟರ್ಸ್‌, BMRCL ಆಫೀಸರ್ಸ್‌, ಸೈಟ್ ಇನ್‌ಚಾರ್ಜ್‌ ಆಫೀಸರ್ಸ್ ಸೇರಿದಂತೆ ಇತರರ ವಿರುದ್ಧ ಗೋವಿಂದಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗನ ದುರ್ಮರಣ ಕೇಸ್ ಕಡೆಗೂ ತನಿಖೆ ಪೂರ್ಣಗೊಳಿಸಿ ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು.

RELATED ARTICLES

Related Articles

TRENDING ARTICLES