Thursday, November 21, 2024

ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 21 ಮಕ್ಕಳು ಅಸ್ವಸ್ಥ

ಬೀದರ್​: ನಿಂಬೂರು ಸರಕಾರಿ ಪ್ರೌಢ ಶಾಲೆ (Government School) ಯಲ್ಲಿ ಬಿಸಿಯೂಟ ಸೇವಿಸಿದ್ದ 30 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಹುಮ್ನಾಬಾದ್(Humnabad) ತಾಲೂಕಿನ ನಿನ್ನೆ ನಡೆದಿದೆ.

ಹೌದು, ನಿನ್ನೆ ನಿಂಬೂರು ಸರಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳು ಮಧ್ಯಾಹ್ನ ಬಿಸಿ ಊಟ ಸೇವಿಸುತ್ತಿದ್ದವರು. ಬಳಿಕ ಸಂಜೆ 5 ಗಂಟೆಯ ಸುಮಾರಿಗೆ ಮಕ್ಕಳಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಶಿಕ್ಷಕರು, ಪಾಲಕರು ಸೇರಿ ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಬೌಬೌ ಬಿರಿಯಾನಿ ದಂಧೆ, ರೆಸ್ಟೊರೆಂಟ್ ಸೀಜ್

ಇನ್ನು ಮಕ್ಕಳು ‌ಅಸ್ವಸ್ಥರಾದ ಸುದ್ದಿ ತಿಳಿದು, ಹುಮ್ನಾಬಾದ್ ಬಿಜೆಪಿ ಶಾಸಕ ಡಾ. ಸಿದ್ದು ಪಾಟೀಲ್​ ಅವರು ಆಸ್ಪತ್ರೆಗೆ ಹೋಗಿ ಮಕ್ಕಳ ಆರೋಗ್ಯ ವಿಚಾಸಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ಮಕ್ಕಳಲ್ಲಿ ಆರೋಗ್ಯ ಸುಧಾರಣೆ ಕಂಡ ಹಿನ್ನೆಲೆ ಡಿಸ್ ಜಾರ್ಜ್ ಮಾಡಿದ್ದಾರೆ.

ಕಲಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥ

ಇದೇ ತಿಂಗಳ ಜೂ.20 ರಂದು ಕಲಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥಗೊಂಡಿದ್ದ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದಲ್ಲಿ ನಡೆದಿತ್ತು. ಅಸ್ವಸ್ಥರನ್ನು ಔರಾದ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಯೋಗಕ್ಷೇಮ ವಿಚಾರಿಸಿದರು.

 

RELATED ARTICLES

Related Articles

TRENDING ARTICLES