Sunday, January 5, 2025

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ; ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ

ಬೆಂಗಳೂರು: ಬಿಜೆಪಿಯ (BJP) ಕರ್ನಾಟಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ  ಬರುತ್ತಿರುವ ಮಾಹಿತಿ ಸುಳ್ಳು ಎಂದು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್(Nalin Kumar Kateel) ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Nalinkumar Kateel: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ

ಹೌದು,ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ನಳಿನ್ ಕುಮಾರ್ ಕಟೀಲ್ ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಅವರು, ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿರುವ ಬಗ್ಗೆ ಬಳ್ಳಾರಿಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ.

ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

 

 

 

RELATED ARTICLES

Related Articles

TRENDING ARTICLES