Thursday, January 23, 2025

ಸೂರ್ಯ-ಚಂದ್ರ ಇರೋದು ಎಷ್ಟು ಸತ್ಯವೋ, ಮತ್ತೊಮ್ಮೆ ಮೋದಿ ಪ್ರಧಾನಿ ಆಗೋದು ಅಷ್ಟೇ ಸತ್ಯ : ಯಡಿಯೂರಪ್ಪ

ಬೆಂಗಳೂರು : ಸೂರ್ಯ-ಚಂದ್ರ ಇರೋದು ಎಷ್ಟು ಸತ್ಯವೋ, ಮುಂದಿನ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದು ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗೋದು ಅಷ್ಟೇ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭವಿಷ್ಯ ನುಡಿದರು.

ಬೆಂಗಳೂರಿನ ಅರಮನೆ ಮೈದಾನ ಹಮ್ಮಿಕೊಂಡಿದ್ದ ಬಿಜೆಪಿ‌ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನರೇಂದ್ರ ಮೋದಿ ಇಳಿಸುವ ವಿಪಕ್ಷಗಳ ಪ್ರಯತ್ನ ಅಕ್ಷಮ್ಯ ಅಪರಾಧ. ಹೀಗಾಗಿ. ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲೇಬೇಕು. ದೇವದುರ್ಲಬವಾದ ನಮ್ಮ ಕಾರ್ಯಕರ್ತರು ಇದ್ದಾರೆ. ಬಿಬಿಎಂಪಿ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಬೇಕು ಎಂದು ಕರೆ ಕೊಟ್ಟರು.

ಇದನ್ನೂ ಓದಿ : ಅಮೆರಿಕ ಸೆನೆಟ್ ನಲ್ಲೂ ‘ನಮೋ’ ಜಪ : 79 ಬಾರಿ ಚಪ್ಪಾಳೆ, 15 ಬಾರಿ ಎದ್ದು ನಿಂತು ಗೌರವ

28ಕ್ಕೆ 28 ಸ್ಥಾನ ಗೆಲ್ಲಬೇಕು

ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲಬೇಕು. ಸಾಧನೆ ಮಾತಾಡಬೇಕು, ಮಾತಾಡೋದೆ ಸಾಧನೆ ಆಗಬಾರದು. 28ಕ್ಕೆ 28 ಸ್ಥಾನಗಳನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿಗೆ ನಾವೆಲ್ಲರೂ ಕೊಡುಗೆ ಕೊಡಬೇಕು ಎಂದು ಯಡಿಯೂರಪ್ಪ ಹೇಳಿದರು.

ಕಾಂಗ್ರೆಸ್ ನ ಉಚಿತ ಗ್ಯಾರಂಟಿಗಳ ಪರಿಣಾಮ ನಮಗೆ ಹಿನ್ನಡೆ ಆಯ್ತು. ನಾನು ಯಾವುದೇ ವಿಷಯಗಳನ್ನು ಪ್ರಸ್ತಾಪ ಮಾಡೋಕೆ ಹೋಗುವುದಿಲ್ಲ. ಆದರೆ, ಕಾಂಗ್ರೆಸ್ ನವರು ಕೊಟ್ಟ ಗ್ಯಾರಂಟಿ ಗಳನ್ನು ಜಾರಿ ಮಾಡಬೇಕು. ಇಲ್ಲ ಅಧಿಕಾರ ಬಿಟ್ಟು ತೊಲಗಬೇಕು ಎಂದು ಗುಡುಗಿದರು.

RELATED ARTICLES

Related Articles

TRENDING ARTICLES