ಬೆಳಗಾವಿ : ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಇಬ್ಬರು ಲೋಕಸಭಾ ಚುನಾವಣೆ ವೇಳೆಗೆ ಮೆಟ್ಟು-ಮೆಟ್ಟಿನಿಂದ ಹೊಡೆದಾಡಿಕೊಳ್ತಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಲೋಕಸಭಾ ಚುನಾವಣೆ ಮುನ್ನ, ಇಲ್ಲವೇ ಚುನಾವಣೆ ಬಳಿಕ ಈ ಸರ್ಕಾರಕ್ಕೆ ಆ್ಯಕ್ಸಿಡೆಂಟ್ ಆಗುತ್ತದೆ ಎಂದು ಲೇವಡಿ ಮಾಡಿದ್ದಾರೆ.
ಸಿದ್ದರಾಮಯ್ಯ, ಡಿಕೆಶಿ ಇಬ್ಬರ ನೇತೃತ್ವದ ಸರ್ಕಾರ ಐದು ವರ್ಷ ಹೋಗುವುದಿಲ್ಲ. ಇದು ಐದು ವರ್ಷ ನಡೆಯುವ ಸರ್ಕಾರ ಅಲ್ಲ. ಲೋಕಸಭಾ ಚುನಾವಣೆ ಮುನ್ನ, ಇಲ್ಲ ಬಳಿಕ ಆ್ಯಕ್ಸಿಡೆಂಟ್ ಆಗುತ್ತೆ. ಅಷ್ಟರಲ್ಲಿ ಇಬ್ಬರು ಮೆಟ್ಟು-ಮೆಟ್ಟಿನಿಂದ ಹೊಡೆದಾಡಿಕೊಳ್ತಾರೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಚಪ್ಪಲಿಯಿಂದ ಹೊಡೆದಾಡಿಕೊಳ್ತಾರೆ ಎಂದು ಯತ್ನಾಳ್ ಗುಡುಗಿದ್ದಾರೆ.
ಇದನ್ನೂ ಓದಿ : ‘ಹ್ಯಾಕ್ ಸಚಿವ’ರೇ, 10+5 = 15 ಕೆಜಿ ಅಕ್ಕಿ ಕೊಡಿ : ಶಾಸಕ ಯತ್ನಾಳ್
ಹಲಕಟಗಿರಿ ಮಾಡೋದಿದ್ರೆ ಅಲ್ಲಿಗೆ ಹೋಗಿ
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮನೆಗೆ ಸೌಜನ್ಯ ಭೇಟಿ ಅಂತಾರೆ. ಇವರು ಸೌಜನ್ಯ ಭೇಟಿ ಕೊಡ್ತಿಲ್ಲ, ಸೋನಿಯಾ ಗಾಂಧಿ ಅವರಿಗೆ ಅಂಜಿಸುವ ಕೆಲಸ ಮಾಡ್ತಾರೆ. ಬೊಮ್ಮಾಯಿಯವರೇ ಅವರನ್ನ ನೀವು ಮನೆ ವರೆಗೂ ಬಿಟ್ಟುಕೊಳ್ಳಬೇಡಿ. ನಾವು ವಿರೋಧ ಪಕ್ಷದವರ ಮನೆಗೆ ಹೋಗುವುದಿಲ್ಲ ಅಂತಾರೆ. ಅದೇ ರೀತಿ ನಾವು ಅವರ ಮನೆಗೆ ಹೋಗುವುದಿಲ್ಲ ಅಂತ ಹೇಳಿ. ಅವರನ್ನ ಸ್ವಾಗತಿಸಿಕೊಂಡ್ರೇ ನಮ್ಮ ಕಾರ್ಯಕರ್ತರು ಮಲಗಿ ಬಿಡ್ತಾರೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ, ಹಲಕಟಗಿರಿ ಮಾಡೋದಿದ್ರೆ ಅಲ್ಲಿಗೆ ಹೋಗಿ ಎಂದು ಘರ್ಜಿಸಿದ್ದಾರೆ.
ನಾವು ಗಟ್ಟಿ ಇದ್ದೇವೆ, ದನ ಕಾಯುತ್ತಿಲ್ಲ
ನಾವು ಯಾರು ಜಗಳ ಮಾಡುತ್ತಿಲ್ಲ, ಪಾರ್ಟಿ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ. ಮೂರು ತಿಂಗಳಲ್ಲಿ ಗ್ಯಾರಂಟಿ ಬಣ್ಣ ಬಯಲು ಆಗಲಿದೆ. ಸಿದ್ದರಾಮಯ್ಯನವರು ಏನು ಹೇಳಿದ್ರು ಅದನ್ನ ಹೊರ ತೆಗೆಯುತ್ತೇವೆ. ನಾವು ಗಟ್ಟಿ ಇದ್ದೇವೆ, ದನ ಕಾಯುತ್ತಿಲ್ಲ. ಆರ್ಥಿಕತೆ ಬಗ್ಗೆಯೂ ಗೊತ್ತಿದೆ. ದೇಶದಲ್ಲಿ ಸಮಾನ ನಾಗರಿಕ ಕಾಯ್ದೆ ಜಾರಿಯಾಗಲಿದೆ. ಪಕ್ಷ ನಿರ್ಣಯ ಮಾಡಿದವರು ವಿರೋಧ ಪಕ್ಷದ ನಾಯಕರು ಆಗಲಿದ್ದಾರೆ. ನಮ್ಮಲ್ಲಿ ಯಾವುದೇ ಒಳ ಪೈಪೋಟಿ ಇಲ್ಲ ಎಂದು ಯತ್ನಾಳ್ ಹೇಳಿದ್ದಾರೆ.